11:14 AM Thursday 22 - January 2026

ಇಬ್ಬರು ಮಕ್ಕಳನ್ನು ಕೊಂದು ಪತ್ನಿಗೂ ಹಲ್ಲೆ: ಆರೋಪಿತ ತಂದೆಯ ಶವ ರೈಲ್ವೆ ಹಳಿಯಲ್ಲಿ ಪತ್ತೆ

21/04/2024

ನವದೆಹಲಿಯ ಮನೆಯೊಂದರಲ್ಲಿ ಒಂಬತ್ತು ವರ್ಷದ ಬಾಲಕಿ ಮತ್ತು ಆಕೆಯ 15 ವರ್ಷದ ಸಹೋದರ ಶವವಾಗಿ ಪತ್ತೆಯಾಗಿದ್ದಾರೆ. ಮಕ್ಕಳ ಕೊಲೆ ಆರೋಪ ಹೊತ್ತಿದ್ದ ಅವರ ತಂದೆ ಕೂಡ ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಕ್ಕಳ ತಾಯಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪೊಲೀಸರ ಪ್ರಕಾರ, ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ, ಪೂರ್ವ ದೆಹಲಿಯ ಶಶಿ ಗಾರ್ಡನ್ ನಲ್ಲಿರುವ ಮನೆಗೆ ಶುಕ್ರವಾರದಿಂದ ಬೀಗ ಹಾಕಲಾಗಿದೆ ಮತ್ತು ಮನೆಯ ವ್ಯಕ್ತಿ ಶ್ಯಾಮ್ಜಿ ಕಾಣೆಯಾಗಿದ್ದಾರೆ ಎಂಬ ಕರೆ ಬಂದಿತ್ತು‌ ಎಂದಿದ್ದಾರೆ.

ಪೊಲೀಸರು ಸ್ಥಳಕ್ಕೆ ತಲುಪಿ, ಬಲವಂತವಾಗಿ ಮುಚ್ಚಿದ ಫ್ಲ್ಯಾಟ್ ಗೆ ಪ್ರವೇಶಿಸಿ, ಒಂದು ಕೋಣೆಯಲ್ಲಿ ಮಕ್ಕಳ ಶವಗಳನ್ನು ವಶಪಡಿಸಿಕೊಂಡ್ರೆ ತಾಯಿ ಮತ್ತೊಂದು ಕೋಣೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮಹಿಳೆಗೆ ಅನೇಕ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಯೂರ್ ವಿಹಾರ್ ನಲ್ಲಿ ಟೀ ಸ್ಟಾಲ್ ನಡೆಸುತ್ತಿದ್ದ ಶ್ಯಾಮ್ಜಿ ತನ್ನ ಮಕ್ಕಳನ್ನು ಕತ್ತು ಹಿಸುಕಿ ಕೊಂದು, ಪತ್ನಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನಿಖೆ ಮಾಡುತ್ತಿರುವಾಗ ಆನಂದ್ ವಿಹಾರ್ ಬಳಿಯ ರೈಲ್ವೆ ಹಳಿಗಳಲ್ಲಿ ಶ್ಯಾಮ್ಜಿ ಅವರ ಶವ ಪತ್ತೆಯಾಗಿದೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತು.
ಕೊಲೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version