ಒಡಿಶಾ ರೈಲು ದುರಂತ: ಕನ್ನಡಿಗರ ಸುರಕ್ಷತೆಗೆ ಸಚಿವ ಸಂತೋಷ್ ಲಾಡ್ ರನ್ನು ನಿಯೋಜಿಸಿದ ಸಿದ್ದರಾಮಯ್ಯ - Mahanayaka

ಒಡಿಶಾ ರೈಲು ದುರಂತ: ಕನ್ನಡಿಗರ ಸುರಕ್ಷತೆಗೆ ಸಚಿವ ಸಂತೋಷ್ ಲಾಡ್ ರನ್ನು ನಿಯೋಜಿಸಿದ ಸಿದ್ದರಾಮಯ್ಯ

Santosh Lad
03/06/2023


Provided by

ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ.
ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ.

ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ