11:47 PM Friday 11 - September 2026

ಸಿದ್ದರಾಮಯ್ಯ, ಡಿ.ಕೆ.ಬ್ರದರ್ಸ್ ಚಿತ್ರವಿರುವ ಕುಕ್ಕರ್ ವಶಕ್ಕೆ ಪಡೆದ ಚುನಾವಣಾಧಿಕಾರಿಗಳು!

dk brothers
21/03/2024

ತುಮಕೂರು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ದಾಸ್ತಾನು ಮೇಲೆ ದಾಳಿ ಮಾಡಿರೋ ಚುನಾವಣಾ ಅಧಿಕಾರಿಗಳು ಅಪಾರ ಪ್ರಮಾಣದ ಕುಕ್ಕರ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಕುಣಿಗಲ್ ಪಟ್ಟಣದ 22ನೇ ವಾರ್ಡ್ ನ ಮಲ್ಲಿ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು ಬೆಟ್ಟಸ್ವಾಮಿ ಎಂಬಾತನಿಗೆ ಸೇರಿದ ಗೋದಾಮಿನಲ್ಲಿ ಕುಕ್ಕರ್ ಗಳ ಸಂಗ್ರಹ ಮಾಡಲಾಗಿತ್ತು.

ಜೆಡಿಎಸ್ ಕಾರ್ಯಕರ್ತರ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ, 80ಕ್ಕೂ ಹೆಚ್ಚು ಕುಕ್ಕರ್ ಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು. ಅದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಂಸದ ಡಿ.ಕೆ ಸುರೇಶ್, ಶಾಸಕ ಡಾ.ರಂಗನಾಥ್ ಭಾವಚಿತ್ರವಿರುವ ಕುಕ್ಕರ್ ಬಾಕ್ಸ್ ಗಳನ್ನು ಟಿಸಿ ರಿಪೇರಿ ಮಾಡುವ ಗೋದಾಮಿನಲ್ಲಿ ಇರಿಸಲಾಗಿತ್ತು.

ಮಧ್ಯಾಹ್ನ ಕುಕ್ಕರ್ ಕೇಳಿದ್ದ ಮಹಿಳೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿತ್ತು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ಕುಣಿಗಲ್ ಪಟ್ಟಣ ದಲ್ಲಿ ಕುಕ್ಕರ್ ಪತ್ತೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ಇದಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಸದ್ಯ ಕುಕ್ಕರ್ ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version