ವರುಣಾದಲ್ಲಿ ಸಿದ್ದರಾಮಯ್ಯಗೆ ಸೋಲಿನ ಭಯ! : ನಾನು ಭೂತನೂ ಅಲ್ಲ, ಪಿಶಾಚಿನೂ ಅಲ್ಲ ಎಂದು ವಿ.ಸೋಮಣ್ಣ! - Mahanayaka

ವರುಣಾದಲ್ಲಿ ಸಿದ್ದರಾಮಯ್ಯಗೆ ಸೋಲಿನ ಭಯ! : ನಾನು ಭೂತನೂ ಅಲ್ಲ, ಪಿಶಾಚಿನೂ ಅಲ್ಲ ಎಂದು ವಿ.ಸೋಮಣ್ಣ!

v somanna
22/04/2023

ಚಾಮರಾಜನಗರ: ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೆಚ್ಚು ಪ್ರಚಾರ ನಡೆಸುತ್ತಿದ್ದು, ಸೋಲಿನ ಭೀತಿಯಿಂದ ಹೆಚ್ಚು ಪ್ರಚಾರ ನಡೆಸುತ್ತಿದ್ದಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ.

ಪ್ರಚಾರ ನಡೆಸುವುದು ಅವರ ಕರ್ತವ್ಯ, ನಾನು ಭೂತನೂ ಅಲ್ಲ, ಪಿಶಾಚಿನೂ ಅಲ್ಲ, ನಾನೊಬ್ಬ ಮನುಷ್ಯ, ಸಿದ್ದರಾಮಯ್ಯ ನಾನು ಜೊತೆಯಲ್ಲಿ ಕೆಲಸ ಮಾಡಿದವರು. ಅವರು ನನಗಿಂತ ದೊಡ್ಡ ನಾಯಕರು, ಅವರು ಪ್ರಚಾರಕ್ಕೆ ಎಷ್ಟು ಬಾರಿ ಬೇಕಾದ್ರೂ ಬರ್ತಾರೆ, ನಾನ್ಯಾಕೆ ಪ್ರಶ್ನೆ ಮಾಡಲಿ ಅವರು ಬರುವುದರಿಂದ ಮತದಾರ ಎಚ್ಚೆತ್ತುಕೊಳ್ಳುತ್ತಾರೆ.  ಎಂದು ಅವರು ಹೇಳಿದರು.

ಇನ್ನೂ ವರುಣಾ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಪ್ರಚಾರ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಪ್ರತಾಪ ಅವನು ಪ್ರತಾಪ ಸಿಂಹ..  ಎಲ್ಲಿಗೆ ಆದ್ಯತೆ ನೀಡಬೇಕು ಎಂದು ಅವನಿಗೆ ಗೊತ್ತಿದೆ.. ನಾನು ಚಾಮರಾಜನಗರದಲ್ಲಿದ್ದೇನೆ. ಆತ ವರುಣಾದಲ್ಲಿದ್ದಾನೆ.. ಪ್ರತಾಪಸಿಂಹ ಒಬ್ಬ ಶಿಸ್ತಿನ ಸಿಪಾಯಿ, ಭವಿಷ್ಯದ ನಾಯಕ.. ಪ್ರತಾಪಸಿಂಹನ‌ ದೂರದೃಷ್ಟಿ ಬೇರೆಯವರಿಗೂ ಬಂದ್ರೆ ಹೈಕ್ಲಾಸ್.. ಎಂದು ಹೊಗಲಿದರು.


Provided by

ಬಿಜೆಪಿಯಿಂದ ಲಿಂಗಾಯತ ಸಿಎಂ ಅಸ್ತ್ರ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಸಿದ ಅವರು, ಒಂದು ವರ್ಷದ ಹಿಂದೆಯೇ ಅಮಿತ್ ಷಾ ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ಎಂದು ಹೇಳಿದ್ರು.. ಇದನ್ನು‌ ನೀವೆ ಅರ್ಥ ಮಾಡಿಕೊಳ್ಳಬೇಕು.. ಮುಂದಿನ ಸಿಎಂ ಆಗುವ ಬಗ್ಗೆ ನಾನು ಭ್ರಮೆ‌ ಇಟ್ಟುಕೊಂಡಿಲ್ಲ.. ಇನ್ನು ಇಪ್ಪತ್ತು ದಿನ ಕಾಯಿರಿ, ಎಲ್ಲಾ ಸರಿಹೋಗುತ್ತೆ..ತಾಯಿ ಚಾಮುಂಡಿ ಏನು ಹೇಳ್ತಾಳೆ ಅದನ್ನು ಕೇಳ್ತೀನಿ.. ಎಂದು ಅವರು ಹೇಳಿದರು.

ಬಿಜೆಪಿಯ ಲಿಂಗಾಯತ ಡ್ಯಾಂ ಒಡೆದಿದೆ ಎಂಬ ಡಿಕೆಶಿ ಹೇಳಿಕೆಗೆ ಉತ್ತರಿಸಿದ ಸೋಮಣ್ಣ, ಅವರು ಹಗಲು ಕನಸು ಕಾಣುತ್ತಿದ್ದಾರೆ..  ಬಿಜೆಪಿ ವೀರಶೈವ, ಲಿಂಗಾಯತರನ್ನು, ಅನ್ಯ ಪಕ್ಷದವರನ್ನು ಒಂದೇ ರೀತಿ ಕಾಣುತ್ತಿದೆ.. ಎಲ್ಲಿಗ್ ಹೋಗ್ತಾರೆ, ಏನ್ರೀ ಕಥೆ. ಇತಿಹಾಸ ಏನು ಎಂದು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು.. ಒಳಮೀಸಲಾತಿ ಆಯ್ತು, ಲಿಂಗಾಯತರನ್ನು ಡಿವೈಡ್ ಮಾಡಿದ್ರಿ, ಅದು‌ ಹೋಯ್ತು.. ನೀವು ಯಾವುದರಲ್ಲಿ ಸಕ್ಸಸ್ ಆಗಿದಿರಿ. 125 ವರ್ಷ ಇತಿಹಾಸವಿರುವ ರಾಷ್ಟ್ರೀಯ ಪಕ್ಷ ಯಾಕೆ ಈ ರೀತಿ ಮಾತನಾಡುತ್ತಿದ್ದೀರಿ. ಲಿಂಗಾಯತರು ಅಲ್ಲೂ ಇಲ್ವಾ? ಆದ್ರೆ ಹೆಚ್ಚಿನ ಸಂಖ್ಯೆ ಬಿಜೆಪಿಯಲ್ಲಿದ್ದಾರೆ.. ನಿಜಲಿಂಗಪ್ಪ, ವಿರೇಂದ್ರ ಪಾಟೀಲ್ ಅವರಿಗೆ ಏನಾಯ್ತು ಅಂತಾ ಎಲ್ಲರಿಗೂ ಗೊತ್ತಿದೆ.. ಎಂದು  ತಿರುಗೇಟು ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…


Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ