ಮುಂದೆ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಅವರ ಸಿಡಿ ಬರಬಹುದು: ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಬೆಳಗಾವಿ: ಮುಂದೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಸಿಡಿ ಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಪ್ರಜ್ವಲ್ ಕೇಸ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆಡಿಯೋ ಸುತ್ತು ಹಾಕಿ ಇದೆ. ನನ್ನ ಪ್ರಕರಣದಲ್ಲಿ ಡಿಕೆ ನೇರವಾಗಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳಿವೆ ಎಂದು ಹೇಳಿದ್ದಾರೆ.
. ಮುಂದೆ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿ ಬರಬಹುದು. ಮೊದಲಿನಿಂದ ಸಿಡಿ ಬಗ್ಗೆ ನಾನು ಹೇಳಿಕೊಂಡೇ ಬಂದಿದ್ದೆ. ಆಗ ಎಲ್ಲರೂ ನನ್ನ ಹೇಳಿಕೆ ನಿರ್ಲಕ್ಷ್ಯ ಮಾಡುತ್ತ ಬಂದರು. ಇವತ್ತು ಒಬ್ಬರಿಗೆ ಆಗಿದೆ, ಮುಂದೆ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ.ಪರಮೇಶ್ವರ್ ಅವರಿಗೂ ಬರಬಹುದು. ದಯವಿಟ್ಟು ಸಿಎಂ, ಗೃಹಸಚಿವರು ಇತಿಶ್ರೀ ಹಾಡಬೇಕು ಅಂತ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ನನ್ನ ಕೇಸ್ ನಲ್ಲಿ ಡಿ.ಕೆ.ಶಿವಕುಮಾರ್ ಷಡ್ಯಂತ್ರ ಮಾಡಿರುವ ಬಗ್ಗೆ ಸಾಕ್ಷ್ಯಗಳು ಇವೆ. ನಾನು ಮಾಧ್ಯಮಗಳಿಗೆ ಈ ಸಾಕ್ಷ್ಯಗಳನ್ನು ಬಿಡುಗಡೆ ಮಾಡಲ್ಲ. ಪ್ರಕರಣವನ್ನು ಸಿಬಿಐಗೆ ನೀಡಿದ್ರೆ ಎಲ್ಲಾ ಸಾಕ್ಷ್ಯ ಕೊಡುತ್ತೇನೆ. ನನ್ನ ಪ್ರಕರಣ ಎಸ್ ಐಟಿಗೆ ನೀಡಲಾಗಿದೆ, ಅದರ ಬಗ್ಗೆ ವಿಶ್ವಾಸವಿಲ್ಲ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
‘ಸುಪ್ರೀಂ’ ಹಾಲಿ ನ್ಯಾಯಮೂರ್ತಿ ಮೇಲುಸ್ತುವಾರಿಯಲ್ಲಿ ತನಿಖೆ ಆಗಬೇಕು. ಮಹಾನ್ ನಾಯಕ ಹಣದ ವಿಚಾರದಲ್ಲಿ ಸಾಕಷ್ಟು ಪ್ರಭಾವಿ ಇದ್ದಾರೆ. ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬೇಕು ಅನ್ನೋ ಸೊಕ್ಕು ಇದೆ. ಕಾನೂನು ಉಳಿಯಬೇಕು ಅಂದ್ರೆ ಈ ಪ್ರಕರಣದಲ್ಲಿ ಫಿಕ್ಸ್ ಆಗಬೇಕು ಎಂದು ರಮೇಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97