ಸಿದ್ದರಾಮಯ್ಯನವರೇ ನಕ್ಸಲರಿಗೆ ಶರಣಾಗಿದ್ದಾರೆ: ಯತ್ನಾಳ್ ಕಿಡಿ
ವಿಜಯಪುರ: ಸಿದ್ದರಾಮಯ್ಯನವರೇ ನಕ್ಸಲರಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ನಕ್ಸಲರ ಶರಣಾಗತಿ ವಿಚಾರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಎಷ್ಟೋ ಪೊಲೀಸ್ ಅಧಿಕಾರಿಗಳು, ರೈತರು ಪ್ರಾಣ ಕಳೆದುಕೊಂಡಿದ್ದಾರೆ. ನಕ್ಸಲರಿಗೆ ಏನು ಕೊಡಬೇಕೆಂದು ಕೋರ್ಟ್ ತೀರ್ಮಾನ ಮಾಡುತ್ತದೆ. ನಕ್ಸಲರಿಂದ ಹತ್ಯೆಯಾದ ಪೊಲೀಸರು, ನಾಗರಿಕರ ಕುಟುಂಬಕ್ಕೆ ಏನು ಕೊಟ್ರು ಎಂದು ಅವರು ಪ್ರಶ್ನಿಸಿದರು.
ಇಂದು ಶರಣಾಗಿ ನಾಳೆ ವೆಪನ್ಸ್ ಕೊಡಿ ಅಂತಾರೆ, ಮುಂದಿನ ದಿನಗಳಲ್ಲಿ ಇದೊಂದು ಸ್ಟೈಲ್ ಆಗುತ್ತದೆ. ಕೆಲ ದಿನ ಬಂದೂಕು ಹಿಡಿದು ಓಡಾಡುತ್ತಾರೆ, ನಾಲ್ಕಾರು ಕೊಲೆ ಮಾಡುತ್ತಾರೆ. ನಂತರ 6 ತಿಂಗಳು ಮಾಯವಾಗುತ್ತಾರೆ. ನಂತರ ಶರಣಾಗುತ್ತಾರೆ, ಅವರಿಗೆ ವಿಶೇಷ ಪ್ಯಾಕೇಜ್ ಕೊಡುತ್ತೀರಿ ಎಂದು ಯತ್ನಾಳ್ ಕಿಡಿಕಾರಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: