ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಸುಟ್ಟೋಗ್ತಾರೆ: ಜಮೀರ್ ಅಹ್ಮದ್ ಖಾನ್ - Mahanayaka

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಸುಟ್ಟೋಗ್ತಾರೆ: ಜಮೀರ್ ಅಹ್ಮದ್ ಖಾನ್

Zameer Ahmed
26/02/2025

Zameer Ahmed Khan– ಬಳ್ಳಾರಿ: ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಅಂತ ಸಿಎಂ ಸಿದ್ದರಾಮಯ್ಯ ಪರ ಸಚಿವ ಜಮೀರ್ ಅಹ್ಮದ್ ಖಾನ್ ಬ್ಯಾಟಿಂಗ್ ಮಾಡಿದ್ದಾರೆ.


Provided by

ಸಿಎಂ ಬದಲಾವಣೆ ವಿಚಾರವಾಗಿ ಬಳ್ಳಾರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿಯಿಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ, ಖಾಲಿ ಇದ್ರೆ ತಾನೆ ಚರ್ಚೆ ಅಂತ ಜಮೀರ್ ಹೇಳಿದರು.

ಸಿದ್ದರಾಮಯ್ಯನವರ ಖುರ್ಚಿ ಮುಟ್ಟೋಕೆ ಸಾಧ್ಯ ಏನ್ರೀ? ಎಂದು ಪ್ರಶ್ನಿಸಿದ ಜಮೀರ್, ಅದೊಂಥರ ಬೆಂಕಿ, ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ ಎಂದು ಎಚ್ಚರಿಕೆ ನೀಡಿದರಲ್ಲದೇ, ನಾವು ಟಗರು ಅಂತಿವಿ, ಆ ಬೆಂಕಿನ ಮುಟ್ಟೋಕೆ ಸಾಧ್ಯವಿಲ್ಲ , ಸುಟ್ಟು ಭಸ್ಮ ಆಗ್ತಾರೆ ಎಂದರು.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ