ಸಿದ್ದರಾಮಯ್ಯ ಪ್ರಮಾಣ ವಚನ: ದಲಿತ ಸಂಘಟನೆಗಳ ಐಕ್ಯತಾ ಹೋರಾಟ ಸಮಿತಿಯಿಂದ ಸಂಭ್ರಮ - Mahanayaka
10:13 AM Tuesday 16 - September 2025

ಸಿದ್ದರಾಮಯ್ಯ ಪ್ರಮಾಣ ವಚನ: ದಲಿತ ಸಂಘಟನೆಗಳ ಐಕ್ಯತಾ ಹೋರಾಟ ಸಮಿತಿಯಿಂದ ಸಂಭ್ರಮ

siddaramaiah
21/05/2023

ಉಡುಪಿ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ದಲಿತ ಸಂಘಟನೆಗಳ ಐಕ್ಯತಾ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಸಿದ್ಧರಾಮಯ್ಯ ಅವರ ಕಟೌಟ್ ಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಆಚರಣೆ ನಡೆಸಲಾಯಿತು.


Provided by

ದಲಿತ ಚಿಂತಕ ಜಯನ್ ಮಲ್ಪೆ ಮಾತನಾಡಿ,  ಪ್ರಜಾಪ್ರಭುತ್ವ ಹಕ್ಕುಗಳನ್ನು ಕಸಿಯುತ್ತಿರುವ ಇಂದಿನ ಸಂದರ್ಭದಲ್ಲಿ ಶೋಷಿತ ಸಮುದಾಯದ ನಾಯಕರಾಗಿರುವ ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದು ಹರ್ಷ ತಂದಿದೆ. ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ನೀಡುವ ನಿಜವಾದ ಜನ ನಾಯಕ ಸಿದ್ಧರಾಮಯ್ಯ. ಅಂಬೇಡ್ಕರ್ ಚಿಂತನೆ ಜಾರಿ ಗೊಳಿಸಲು ಪ್ರಮುಖ ನಾಯಕನನ್ನು ರಾಜ್ಯದ ಜನತೆ ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ನಾವು ಜನರನ್ನು ಅಭಿನಂದಿಸುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ದಲಿತ ಮುಖಂಡರಾದ ಸುಂದರ್ ಮಾಸ್ತರ್, ಶ್ಯಾಮ್ರಾಜ್ ಬಿರ್ತಿ, ವಾಸುದೇವ ಮುದ್ದೂರು, ಶ್ಯಾಮ್ ತೆಕ್ಕಟ್ಟೆ, ಸಂಜೀವ ಬಳ್ಕೂರು, ಗಣೇಶ್ ನೆರ್ಗಿ, ಶಿವಾನಂದ ಬಿರ್ತಿ ಮೊದಲಾದವರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ