ಸಿದ್ದರಾಮಯ್ಯ ಏನಾದರೂ ಪಾಕಿಸ್ತಾನದ ಮುಖ್ಯಮಂತ್ರಿನಾ?: ಯತ್ನಾಳ್ ಹೀಗೆ ಹೇಳಿದ್ಯಾಕೆ?

yathnall
29/08/2023

ಸಿದ್ದರಾಮಯ್ಯ ಏನಾದರೂ ಪಾಕಿಸ್ತಾನದ ಮುಖ್ಯಮಂತ್ರಿನಾ? ಹೀಗಂತಾ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಮರು ಪ್ರಶ್ನೆ ಹಾಕಿದ ಘಟನೆ ನಡೆಯಿತು.

ಕೆಲ ಬಿಜೆಪಿ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಏನಾದರೂ ಪಾಕಿಸ್ತಾನದ ಮುಖ್ಯಮಂತ್ರಿನಾ? ಮುಖ್ಯಮಂತ್ರಿ ಅಂದರೆ ಶಾಸಕರು ಅವರ ಬಳಿ ಹೋಗುವುದು ಸಹಜ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಆತ್ಮೀಯತೆ ಇದೆ. ನಾನು ಆಸ್ಪತ್ರೆಯಲ್ಲಿದ್ದಾಗ ಸಿದ್ದರಾಮಯ್ಯ ನನ್ನ ನೋಡಲು ಬಂದಿದ್ದರು. ಸದ್ಯ ಯಾಕೋ ಸಿದ್ದರಾಮಯ್ಯ ಅವರು ಈಗ ಬಹಳ ಸೈಲೆಂಟ್ ಆಗಿದ್ದಾರೆ. ಯಾಕೆ ಈಗ ಸೈಲೆಂಟ್ ಆಗಿದ್ದೀರಾ ಕೇಳಿದ್ದೆ. ಏನ್ ಮಾಡೋದು ಯತ್ನಾಳ್ ಇದು ನನ್ನ ಕೊನೆ ಅವಧಿ ಎಂದಿದ್ದರು. ಆದರೆ ಯಾರು ಏನೇ ಅಂದರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದಿದ್ದರು. ರಾಜ್ಯದ ಜನರಿಗೆ ಉತ್ತಮ ಆಡಳಿತ ನೀಡುತ್ತೇನೆ ಅಂತ ಹೇಳಿದ್ದರು ಎಂದು ಯತ್ನಾಳ ತಿಳಿಸಿದರು.

ಇತ್ತೀಚಿನ ಸುದ್ದಿ

Exit mobile version