ಅಕ್ಕಿಗಾಗಿ ಪಟ್ಟು ಸಡಿಲಿಸದ ಸಿದ್ದರಾಮಯ್ಯ: ಗ್ಯಾರೆಂಟಿ ಈಡೇರಿಸಲು ಹೊಸ ಪ್ಲಾನ್ - Mahanayaka
1:25 AM Tuesday 18 - November 2025

ಅಕ್ಕಿಗಾಗಿ ಪಟ್ಟು ಸಡಿಲಿಸದ ಸಿದ್ದರಾಮಯ್ಯ: ಗ್ಯಾರೆಂಟಿ ಈಡೇರಿಸಲು ಹೊಸ ಪ್ಲಾನ್

c.m siddaramaya
17/06/2023

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ತೆಲಂಗಾಣದ ಮುಖ್ಯಮಂತ್ರಿಗಳೊಂದಿಗೆ ಖುದ್ದಾಗಿ ಮಾತನಾಡಿದ್ದು, ಅಲ್ಲಿ ಅಕ್ಕಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದರು. ಆಂಧ್ರಪ್ರದೇಶದವರೊಂದಿಗೆ ನಮ್ಮ ಮುಖ್ಯ ಕಾರ್ಯದರ್ಶಿಗಳು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿಯೇ ಅಕ್ಕಿ ಲಭ್ಯವಿದೆ. ಕಮಿಷನ್ ಆಮಿಷಕ್ಕೆ ಹೊರರಾಜ್ಯಗಳಿಂದ ಅಕ್ಕಿ ಖರೀದಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿಯೇ ದೊರೆಯುವುದಾದರೆ ಕೊಡಿಸಲಿ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ