6:02 AM Saturday 12 - September 2026

ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ: ಸಿ.ಟಿ.ರವಿಗೆ ಚುಚ್ಚಿದ ಸಿದ್ದರಾಮಯ್ಯ

c t ravi
23/02/2023

ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿ.ಟಿ.ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಚುಚ್ಚಿದ್ದಾರೆ.

ಸಿ.ಟಿ.ರವಿ ಮಾಂಸ ಸೇವಿಸಿ ದೇವಸ್ಥಾನಕ್ಕೆ ಪ್ರವೇಶಿಸಿದ್ದಾರೆ ಅನ್ನೋ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿ.ಟಿ.ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ.ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version