1:39 AM Wednesday 10 - December 2025

ಸಿದ್ದರಾಮಯ್ಯ ಹಿಂದೂ ವಿರೋಧಿ ಅಲ್ಲ: ಪುತ್ರ ಡಾ.ಯತೀಂದ್ರ

19/02/2021

ಮೈಸೂರು:  ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿಲ್ಲ ಎಂದ  ಮಾತ್ರಕ್ಕೆ ಸಿದ್ದರಾಮಯ್ಯನವರು ಹಿಂದೂ ವಿರೋಧಿ ಅಲ್ಲ ಎಂದು ವರುಣಾ ಕ್ಷೇತ್ರದ ಶಾಸಕ, ಸಿದ್ದರಾಮಯ್ಯರ ಪುತ್ರ  ಡಾ.ಯತೀಂದ್ರ ಹೇಳಿದ್ದಾರೆ.

ಜಿಲ್ಲೆಯ ತಿ.ನರಸಸೀಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ರಾಮಮಂದಿರಕ್ಕೆ ಯಾರು ದುಡ್ಡು ಕೊಟ್ಟಿದ್ದಾರೆ, ಯಾರು ಕೊಟ್ಟಿಲ್ಲ ಎಂದು ಕೇಳುವುದು ಸರಿಯಲ್ಲ ಎಂದು ಅವರು ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಹಿಂದೂ ವಿರೋಧಿ ಹಣೆಪಟ್ಟಿ ಕಟ್ಟಲು ಯಾರಿಂದಲೂ ಸಾಧ್ಯವಿಲ್ಲ. ಅವರು ಎಷ್ಟರ ಮಟ್ಟಿಗೆ ಹಿಂದೂಗಳೋ, ಅದಕ್ಕಿಂತ ಎರಡರಷ್ಟು ಹಿಂದೂಗಳು ನಾವು ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರೋಧಿಗಳಿಗೆ ತಿರುಗೇಟು ನೀಡಿದರು.

ಇತ್ತೀಚಿನ ಸುದ್ದಿ

Exit mobile version