ಟೆರರಿಸಂಗೆ ಸಪೋರ್ಟ್ ಮಾಡ್ತೀವಿ ಅಂತ ಡಿಕೆಶಿ ಹೇಳಿದ್ದಾರಾ?: ಮಂಗಳೂರಿನಲ್ಲಿ ಸಿದ್ದರಾಮಯ್ಯ ಪ್ರಶ್ನೆ - Mahanayaka

ಟೆರರಿಸಂಗೆ ಸಪೋರ್ಟ್ ಮಾಡ್ತೀವಿ ಅಂತ ಡಿಕೆಶಿ ಹೇಳಿದ್ದಾರಾ?: ಮಂಗಳೂರಿನಲ್ಲಿ ಸಿದ್ದರಾಮಯ್ಯ ಪ್ರಶ್ನೆ

siddaramaiha
17/12/2022

ದಕ್ಷಿಣ ಕನ್ನಡ: ಡಿ.ಕೆ.ಶಿವಕುಮಾರ್ ಟೆರರಿಸಂಗೆ ಸಪೋರ್ಟ್ ಮಾಡ್ತೀವಿ ಅಂತ ಹೇಳಿದ್ದಾರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರಿನಲ್ಲಿ ಮಾಧ್ಯಮಗಳನ್ನು ಪ್ರಶ್ನಿಸಿದರು.

ಮಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ,  ಡಿ.ಕೆ.ಶಿವಕುಮಾರ್ ಅವರು ಭಯೋತ್ಪಾದನೆ ಪರ ಹೇಳಿಕೆ ನೀಡಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು.

ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ ಎಂದಷ್ಟೇ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ, ಟೆರರಿಸಂ ಸಪೋರ್ಟ್ ಮಾಡ್ತೀನಿ ಅಂತ ಹೇಳಿದ್ದರಾ..? ಎಂದು ಅವರು ಪ್ರಶ್ನಿಸಿದರು.

ಬಿಜೆಪಿಯವರು ಡಿ.ಕೆ.ಶಿವಕುಮಾರ್ ಹೇಳಿಕೆ ತಿರುಚಿ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದ ಅವರು, ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಭಯೋತ್ಪಾದನೆ ಹತ್ತಿಕ್ಕಿದ್ಯಾ..? ಎಂದು ಪ್ರಶ್ನಿಸಿದಲ್ಲದೇ,  ದೇಶದಲ್ಲಿ ಉಗ್ರಗಾಮಿ ಚಟುವಟಿಕೆ ಹತ್ತಿಕ್ಕಿ, ಬರೀ ಜನರನ್ನ ಪ್ರಚೋದನೆ ಮಾಡಿ, ಭಾವನಾತ್ಮಕ ವಿಚಾರ ಮಾತನಾಡೋದಲ್ಲ ಎಂದರು.

ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ:

ನೈತಿಕ ಪೊಲೀಸ್ ಗಿರಿ ನಡೆಸಲು ಕಾನೂನಿನಲ್ಲಿ ಅವಕಾಶ ಇಲ್ಲ,  ಮುಖ್ಯಮಂತ್ರಿಯೇ ನೈತಿಕ ಪೊಲೀಸ್ ಗಿರಿ ಪ್ರೇರೇಪಿಸುವ ಕೆಲಸ ಮಾಡ್ತಿದ್ದಾರೆ. ಎರಡು ತಿಂಗಳಲ್ಲಿ ಸುಮಾರು ಏಳೆಂಟು ಕೇಸುಗಳು ಆಗಿದೆ.  ಇದನ್ನ ಖಂಡಿಸ್ತೇನೆ, ಹಾಗೂ ಅವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಮುಖ್ಯಮಂತ್ರಿಗೆ ಕಾನೂನು ಗೊತ್ತಿದ್ಯಾ ಗೊತ್ತಿಲ್ಲ, ಅವರು ಹೇಳಿದ್ರು ಅಂತ ಮಾಡ್ತಾರೆ. ಸಂವಿಧಾನ ಮತ್ತು ಐಪಿಸಿಯಲ್ಲಿ ನೈತಿಕ ಪೊಲೀಸ್ ಗಿರಿಗೆ ಅವಕಾಶ ಇದ್ಯಾ? ಪೊಲೀಸ್ ಇರೋದು  ಕಾನೂನು ಸುವ್ಯವಸ್ಥೆ ಕಾಪಾಡಲು,  ಅನಗತ್ಯವಾಗಿ ಕಾನೂನು ಸುವ್ಯವಸ್ಥೆ ಹಾಳು ಮಾಡೋದು ಖಂಡನೀಯ ಎಂದರು.

ಸರ್ಕಾರ ಇದಕ್ಕೆ ಯಾವುದೇ ಕಾರಣಕ್ಕೆ ಅವಕಾಶ ಕೊಡಬಾರದು. ಮುಖ್ಯಮಂತ್ರಿಯೇ ಪ್ರೇರಣೆ ನೀಡುವ ಕೆಲಸ ಮಾಡಿದ್ರೆ ಏನಾಗುತ್ತೆ? ಆಕ್ಷನ್ ಗೆ ರಿಯಾಕ್ಷನ್ ಇದ್ದೇ ಇರುತ್ತದೆ ಅಂದರೆ ಏನರ್ಥ? ಕೊಲೆ ಮಾಡಿದ್ರೆ ಮತ್ತೊಂದು ಕೊಲೆ ಮಾಡಬೇಕು ಅಂತ ಅರ್ಥನಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ