4:10 AM Tuesday 8 - September 2026

ಸಿದ್ದರಾಮಯ್ಯ ಸ್ವಯಂ ಘೋಷಿತ ಸಂವಿಧಾನ ಪಂಡಿತ: ಹೆಚ್​​.ಡಿ ಕುಮಾರಸ್ವಾಮಿ

hd kumaraswamy
23/01/2022

ಬೆಂಗಳೂರು: ನಮ್ಮ ಪಕ್ಷ ಮತ್ತು ನಮ್ಮ ಬಗ್ಗೆ ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಅವರು ಟ್ವೀಟ್​ ಮಾಡಿ, ಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು? ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ? ಪ್ರಜಾಪ್ರಭುತ್ವದಲ್ಲಿ ಒಂದು ಜಿಲ್ಲೆಯಿಂದಲೇ ಒಂದು ಪಕ್ಷವನ್ನು ಓಡಿಸಿ ಎನ್ನುವುದು ಎಂಥಾ ರಾಜಕಾರಣ? ಲಂಗು ಲಗಾಮು ಇಲ್ಲದೆ ನಾಲಿಗೆ ಜಾರುವ ಇಂಥ ಜನರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ. ಸುಳ್ಳಿನ ಸಿದ್ದಪುರುಷನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ? ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಅನ್ನುತ್ತಾರೆ. ಮಾತೆತ್ತಿದರೆ ಕುಮಾರಸ್ವಾಮಿಯದ್ದೇ ಜಪ. ಜೊತೆಗೆ ಜೆಡಿಎಸ್ ಬಗ್ಗೆ ವಿಷ ಕಾರುವುದು ಸುಳ್ಳಾ? ಅವರ ಹೇಳಿಕೆಗಳನ್ನು ಇಡೀ ರಾಜ್ಯವೇ ಕೇಳಿಸಿಕೊಂಡಿದೆ. ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ, ಪಾಪ. ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ಲಾಸ್ಟಿಕ್‌ ಅಂಗಡಿಗಳು ಬೆಂಕಿಗೆ ಆಹುತಿ: ಇಬ್ಬರು ಸಜೀವ ದಹನ

ರಸ್ತೆ ಅಪಘಾತಕ್ಕೆ ಕರ್ತವ್ಯ ನಿರತ ಅರಣ್ಯಾಧಿಕಾರಿ ಸಾವು

ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು

“ಮಾಯಾವತಿ ಮಂಕಾದರೆ? ಚುನಾವಣೆ ಸಮೀಪಿಸಿದರೂ ಪ್ರಚಾರ ಮಾಡುತ್ತಿಲ್ಲ”!

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version