ಸಿದ್ದರಾಮಯ್ಯನವರ 5 ವರ್ಷಗಳ ಆಡಳಿತದ ಬಗ್ಗೆ ನಾನು ಹೆಮ್ಮೆಪಡುತ್ತೇನೆ: ರಾಹುಲ್ ಗಾಂಧಿ
ದಾವಣಗೆರೆ: ಸಿದ್ದರಾಮೋತ್ಸವದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲು ಕರ್ನಾಟಕದಲ್ಲಿ ಪ್ರವಾಹದಿಂದ ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸಿದರು.
ಒಬ್ಬ ವ್ಯಕ್ತಿಯಾಗಿ ಸಿದ್ದರಾಮಯ್ಯನವರನ್ನು ಇಷ್ಟಪಡುತ್ತೇನೆ. ಅವರ ವಿಚಾರಗಳ ಬಗ್ಗೆ ನನ್ನ ಸಹಮತ ಇದೆ. ಇವರು ನಡೆಸಿದ 5 ವರ್ಷಗಳ ಆಡಳಿತದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ರಾಹುಲ್ ಗಾಂಧಿ ಹೇಳಿದರು.
ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯದೊರಕಿಸಬೇಕು ಎನ್ನುವ ಸಿದ್ದರಾಮಯ್ಯನವರ ಆಲೋಚನೆ ನನಗೆ ಇಷ್ಟ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸಾಮರಸ್ಯ ಮೂಡಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.
ಕರ್ನಾಟಕ ಹಾಗೂ ಭಾರತದಾದ್ಯಂತ ಕಾಂಗ್ರೆಸ್ ಜನರ ಪರವಾಗಿ ಕೆಲಸ ಮಾಡಿದೆ. ರಾಜ್ಯದಲ್ಲಿ ನಡೆದ ಬಿಜೆಪಿ ಕಮಿಷನ್ ವಿಚಾರ ಎಲ್ಲ ಕಡೆ ಗೊತ್ತಿದೆ. ನಾವು ಕರ್ನಾಟಕವನ್ನು ಸಂವೃದ್ಧಿಗೊಳಿಸಲು ಮುಂದಾಗಿದ್ದೇವೆ. ಕರ್ನಾಟಕದ ವಿರುದ್ಧವಾಗಿ ಬಿಜೆಪಿ ಕೆಲಸ ಮಾಡುತ್ತಿದೆ. ನಾವು ಕರ್ನಾಟಕದ ಪರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























