9:35 AM Thursday 29 - January 2026

ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ದೆಹಲಿಯಿಂದ ವಾಪಸ್ ಆದ ಬಿ.ವೈ.ವಿಜಯೇಂದ್ರ ಹೇಳಿದ್ದೇನು?

b y vijayendra
25/06/2025

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅತೀ ಶೀಘ್ರವೇ ಮಹತ್ವದ ಬದಲಾವಣೆಯಾಗಲಿದ್ದು,  ವಿಪಕ್ಷ ನಾಯಕ ಆರ್.ಅಶೋಕ್ ನಿನ್ನೆ ದೆಹಲಿಗೆ ತೆರಳಿದ್ದರು. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ದೆಹಲಿಗೆ ತೆರಳಿದ್ದು, ದೆಹಲಿಯಿಂದ ವಾಪಸ್ ಆಗುತ್ತಿದ್ದಂತೆಯೇ ಮಹತ್ವದ ಬದಲಾವಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಅತಿ ಶೀಘ್ರದಲ್ಲೇ ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ. ಎಲ್ಲ ಜಿಲ್ಲಾಧ್ಯಕ್ಷರ ಅಭಿಪ್ರಾಯ ಸಂಗ್ರಹಿಸಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಈಗಾಗಲೇ ದೇಶಾದ್ಯಂತ 14 ರಾಜ್ಯಗಳಲ್ಲಿ ಮಾತ್ರ ಅಧ್ಯಕ್ಷರನ್ನ ನೇಮಿಸಲಾಗಿದೆ. ಉಳಿದ ರಾಜ್ಯಗಳಲ್ಲೂ ಆಯ್ಕೆ ಮಾಡಲಿದ್ದಾರೆ. ಇದಾದ ಬಳಿಕ ರಾಷ್ಟ್ರೀಯ ಅಧ್ಯಕ್ಷರನ್ನ ನೇಮಕ ಮಾಡಲಿದ್ದಾರೆ. ಇದು ಬಿಜೆಪಿ ಪಕ್ಷದಲ್ಲಿರುವಂತ ಒಂದು ವಿಧಾನ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯ ಸುಳಿವು ಸಿಗುತ್ತಿದ್ದಂತೆಯೇ ನಿಷ್ಕ್ರಿಯವಾಗಿದ್ದ ನಾಯಕರು ಅಲರ್ಟ್ ಆಗಿದ್ದಾರೆ. ಸದ್ಯ ಬಿ.ಎಸ್.ಯಡಿಯೂರಪ್ಪ ಕುಟುಂಬ ತಮಗೆ ಬೇಕಾದವರನ್ನೇ ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವ ಹಲವು ಆರೋಪಗಳ ನಡುವೆ, ಬಿಜೆಪಿಯಲ್ಲಿ ಪದಾಧಿಕಾರಿಗಳ ಆಯ್ಕೆ ಹೇಗೆ ನಡೆಯುತ್ತದೆ ಎನ್ನುವ ಕುತೂಹಲ ಮನೆ ಮಾಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version