9:17 AM Saturday 18 - October 2025

ಕೊರೊನಾ ಸಂಕಷ್ಟದ ನಡುವೆ ವಿದ್ಯಾರ್ಥಿಗಳಿಗೆ  ಸಿಹಿ ಸುದ್ದಿ ನೀಡಿದ ಶಿಕ್ಷಣ ಸಚಿವರು

suresh kumar
10/04/2021

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೇ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾತನಾಡಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆ ಟಿವಿ ಚಾನೆಲ್ ವೊಂದನ್ನು ತೆರೆಯಲಿದೆ ಎಂದು ಹೇಳಿದ್ದಾರೆ.

 ಸುದ್ದಿಗಾರರ ಜೊತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಮೇ 24ರಿಂದ ಪಿಯುಸಿ ಪರೀಕ್ಷೆಗಳು ಮತ್ತು ಜೂನ್ 20ರಿಂದ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿದೆ. ಇನ್ನೂ ಕೊರೊನಾ ನಡುವೆ ಬದುಕುವುದು ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.

ಕೊರೊನಾ ನಡುವೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ನಿಜವಾದ ಕೊರೊನಾ ವಾರಿಯರ್ಸ್ ಎಂದ ಸಚಿವರು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ ಆರಂಭಿಸಲಾಗುವುದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಯಿಂದಲೇ ಒಂದು ಟಿವಿ ಚಾನೆಲ್ ಆರಂಭಿಸುವ ಪ್ರಸ್ತಾಪವಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

Exit mobile version