ತಿಂಡಿ ನೀಡುವ ನೆಪದಲ್ಲಿ ಕರೆದೊಯ್ದು ಬಾಲಕಿಯ ಸಾಮೂಹಿಕ ಅತ್ಯಾಚಾರ - Mahanayaka

ತಿಂಡಿ ನೀಡುವ ನೆಪದಲ್ಲಿ ಕರೆದೊಯ್ದು ಬಾಲಕಿಯ ಸಾಮೂಹಿಕ ಅತ್ಯಾಚಾರ

uttar pradesh
25/05/2021


Provided by

ಆಗ್ರಾ: ಉತ್ತರ ಪ್ರದೇಶ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಗಳನ್ನು  ಸಿಹಿ ತಿಂಡಿ ಕೊಡಿಸುವ ನೆಪದಲ್ಲಿ ಕರೆದೊಯ್ದ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಆಗ್ರಾದ ಶಂಶಾಬಾದ್ ನ 13 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯಾಗಿದ್ದು, ಪೋಷಕರು ಮದುವೆಗೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ಈ ಸಮುಯವನ್ನು ಬಳಸಿಕೊಂಡ 22 ವರ್ಷ ವಯಸ್ಸಿನ ಆರೋಪಿ ಸಂಜು ಎಂಬಾತ ಜಾಮೂನು ಕೊಡಿಸುವುದಾಗಿ ಹೇಳಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾನೆ, ಬಳಿಕ ಇನ್ನೋರ್ವ ಬಾಲಕನ ಜತೆ ಸೇರಿಕೊಂಡು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನೂ ಘಟನೆ ಪೋಷಕರಿಗೆ ತಿಳಿಯುತ್ತಿದ್ದಂತೆಯೇ ಆರೋಪಿ ಸಂಜುವಿನ ಸಹೋದರ 35 ವರ್ಷ ವಯಸ್ಸಿನ ಮುನ್ನಾ ಎಂಬಾತ, ಬಾಲಕಿಯ ಪೋಷಕರಿಗೆ ಬೆದರಿಕೆ ಹಾಕಿದ್ದು, ಕೇಸು ದಾಖಲಿಸಿದರೆ ನಿನ್ನನ್ನು ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನೂ ಶಂಶಾಬಾದ್ ಠಾಣೆ ಪೊಲೀಸರು ಬಾಲಕಿಯ ಹೇಳಿಕೆ ಪಡೆದುಕೊಂಡು ಐಪಿಸಿ ಮತ್ತು ಪೋಕ್ಸೋ ಕಾಯ್ದೆ ಸಂಬಂಧಿತ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಿಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ