ಪೊಲೀಸರ 5 ತಂಡದಿಂದ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ದಾಳಿ - Mahanayaka
2:05 PM Saturday 17 - January 2026

ಪೊಲೀಸರ 5 ತಂಡದಿಂದ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ದಾಳಿ

police
07/02/2023

ಬೆಳ್ತಂಗಡಿ; ಉಜಿರೆಯ ವಸತಿ ಗೃಹಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಅನುಮಾನದ ಹಿನ್ನಲೆಯಲ್ಲಿ ಜಿಲ್ಲಾ ಎಸ್.ಪಿ ಅವರ ಸೂಚನೆಯಂತೆ ಉಜಿರೆಯ ಎಲ್ಲಾ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಸೋಮವಾರ ರಾತ್ರಿಯ ವೇಳೆ ಐದು ವಿಶೇಷ ಪೊಲೀಸ್ ತಂಡಗಳು ಏಕಕಾಲದಲ್ಲಿ ಲಾಡ್ಜ್ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಆದರೆ ಪರಿಶೀಲನೆಯ ಮೇಳೆ ಯಾವುದೇ ಅನಧಿಕೃತ ಚಟುವಟಿಕೆಗಳು ನಡೆದಿರುವುದು ಕಂಡುಬಂದಿಲ್ಲ ಎಂದು ತಿಳಿದು ಬಂದಿದೆ.

ಕಳೆದ ಕೆಲ ಸಮಯದಿಂದ ಉಜಿರೆಯ ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ಎಲ್ಲ ಲಾಡ್ಜ್ ಗಳಿಗೂ ದಾಖಲೆಗಳನ್ನು ಸಮರ್ಪಕವಾಗಿ ಇರಿಸುವಂತೆ ಹಾಗೂ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ