ಒಂಟಿ ಮಹಿಳೆಯರನ್ನು ಪೀಡಿಸುತ್ತಿದ್ದ ಯುವಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು - Mahanayaka

ಒಂಟಿ ಮಹಿಳೆಯರನ್ನು ಪೀಡಿಸುತ್ತಿದ್ದ ಯುವಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

chikamagalore 3
03/07/2024


Provided by

ಚಿಕ್ಕಮಗಳೂರು: ಒಂಟಿ ಮಹಿಳೆಯರನ್ನು ಪೀಡಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನಿಗೆ ಗ್ರಾಮಸ್ಥರು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಗ್ರಾಮದಲ್ಲಿ ನಡೆದಿದೆ.

ಬೆಳಗ್ಗೆ ವಾಕಿಂಗ್ ಹೋಗುವ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಯುವಕ ತೋಟಕ್ಕೆ ಹೋಗುವ ಮಹಿಳೆಯರ ಜೊತೆ ಅಸಭ್ಯ ವರ್ತನೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

ವ್ಯಕ್ತಿಯನ್ನು ಹಿಡಿದು ಗ್ರಾಮಸ್ಥರಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಂಗನವಾಡಿ ಶಿಕ್ಷಕಿಯ ಜೊತೆಯು ಈತ ದುರ್ವರ್ತನೆ ತೋರಿದ್ದ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ಮಾವಿನಹಳ್ಳಿ ಗ್ರಾಮದ ಮಂಜು ಎಂದು ಗುರುತಿಸಲಾಗಿದೆ.

ತೋಟದಲ್ಲಿ ಅವಿತು ಕುಳಿತಿದ್ದ ಯುವಕನನ್ನು ಹಿಡಿದ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೆಲವರು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹಲ್ಲೆ ನಡೆಸುವುದು ಬೇಡ ಪೊಲೀಸರಿಗೆ ಒಪ್ಪಿಸೋಣ ಎಂದು ಹಿರಿಯರು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಕೆಲವು ದಿನಗಳಿಂದ ಯುವಕ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ. ಸದ್ಯ ಚಿಕ್ಕಮಗಳೂರು ತಾಲೂಕಿನ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ