ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ವಿರೋಧಿಸಿದಾಗ ಚಾಕುವಿನಿಂದ ಇರಿದ ಪಾಪಿ!

22/06/2024
ದಾವಣಗೆರೆ: ಕಾಮುಕನೋರ್ವ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಮಹಿಳೆ ಕಿರುಚಾಡಿದಾಗ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಗುರುವಾರ ನಡೆದಿದೆ.
ವಿವಾಹಿತೆ ಮನೆಯಲ್ಲಿದ್ದ ವೇಳೆ ಮನೆಯೊಳಗೆ ನುಗ್ಗಿದ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆ ಕೂಗಾಡಿದಾಗ ನಿಂದಿಸಿ ಬೆನ್ನು, ಕುತ್ತಿಗೆ ಮತ್ತು ಎದೆಯ ಭಾಗಕ್ಕೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಕೂಗಾಟ ಕೇಳಿದ ನೆರೆಹೊರೆಯವರು ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಮಹಿಳೆ ಬಿದ್ದಿರುವುದು ಕಂಡುಬಂದಿದೆ. ಅವರನ್ನು ಜಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97