ಮದ್ಯದ ಅಮಲಿನಲ್ಲಿ ಹೆತ್ತ ತಾಯಿಯ ಮೇಲೆಯೇ ಅತ್ಯಾಚಾರ ಮಾಡಿದ ಪಾಪಿ!

ಚಿಕ್ಕಬಳ್ಳಾಪುರ: ಮದ್ಯದ ಅಮಲಿನಲ್ಲಿ ಪುತ್ರನೇ ತಾಯಿಯ ಮೇಲೆ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಕೃತ್ಯದ ಬಳಿಕ ತಂದೆ, ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಇಬ್ಬರನ್ನೂ ಮನೆ ಹಿಂಭಾಗದ ತಿಪ್ಪೆಗೆ ಎಸೆದು ಆರೋಪಿ ಪರಾರಿಯಾಗಿದ್ದಾನೆ.
ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಸದ್ಯ ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತಂದೆ, ತಾಯಿಯೊಂದಿಗೆ ವಾಸವಾಗಿದ್ದ ಆರೋಪಿ ಭಾನುವಾರ ರಾತ್ರಿ ಮದ್ಯದ ಅಮಲಲ್ಲಿ ಕೃತ್ಯವೆಸಗಿದ್ದಾನೆ. ಆರೋಪಿಗೆ ಮದುವೆಯಾಗಿದ್ದು, ಪತ್ನಿ ಈತನಿಂದ ದೂರವಿದ್ದಳು ಎನ್ನಲಾಗಿದೆ.
ಡಿವೈಎಸ್ಪಿ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರಿಂದ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth