ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಮಂಗಗಳನ್ನ ಕೊಂದ ಪಾಪಿಗಳು!

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಾನವ ಸಮಾಜ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, 30 ಮಂಗಗಳ ಮಾರಣಹೋಮ ನಡೆದಿದೆ.
ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಮಂಗಗಳನ್ನು ಹತ್ಯೆ ಮಾಡಲಾಗಿದೆ. 16 ಗಂಡು, 14 ಹೆಣ್ಣು, 4 ಮರಿಗಳನ್ನು ಸ್ವಲ್ಪವೂ ಕರುಣೆ ಇಲ್ಲದೇ ಕೊಂದು ರಸ್ತೆಗೆ ಎಸೆಯಲಾಗಿದೆ.
ಎನ್.ಆರ್.ಪುರ ತಾಲೂಕಿನ ದ್ಯಾವಣ ಬಳಿ ಈ ಘಟನೆ ನಡೆದಿದೆ. ಮಂಗಗಳು ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ. 30 ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯಗಳಾಗಿದ್ದು, ಮಂಗಗಳು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿವೆ.
ಘಟನಾ ಸ್ಥಳಕ್ಕೆ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ಭೇಟಿ ನೀಡಿದ್ದಾರೆ. ಡಿ.ಎಫ್.ಓ, ಆರ್.ಎಫ್.ಓ, ಪಿ.ಎಸ್.ಐ. ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ, ಆಶಾಕಾರ್ಯರ್ತೆಯರು ಭೇಟಿ ನೀಡಿದ್ದಾರೆ.
ಮಂಗಗಳ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ಕಿಡಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97