ನೀಟ್ -ಯುಜಿಸಿ ನೆಟ್ ಪರೀಕ್ಷೆ ಅಕ್ರಮ ವಿರುದ್ಧ ಎಸ್ ಐ ಓ ಪ್ರತಿಭಟನೆ - Mahanayaka
11:51 AM Thursday 28 - August 2025

ನೀಟ್ –ಯುಜಿಸಿ ನೆಟ್ ಪರೀಕ್ಷೆ ಅಕ್ರಮ ವಿರುದ್ಧ ಎಸ್ ಐ ಓ ಪ್ರತಿಭಟನೆ

sio protest
30/06/2024


Provided by

ಬಿ.ಸಿ.ರೋಡ್: ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್ ಐ ಓ ಪಾಣೆಮಂಗಳೂರು ಶಾಖೆಯ ವತಿಯಿಂದ ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು.

sio protest

ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಉನ್ನತ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಹಾಗೂ ಈ ಅವ್ಯವಹಾರಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (NTA)ದ ಪಾತ್ರದ ಕುರಿತು ತನಿಖೆ ನಡೆಸಬೇಕೆಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ  ಕಾನೂನು ವಿದ್ಯಾರ್ಥಿ ಬ್ರ. ನಿಹಾಲ್ ಕುದ್ರೋಳಿ , ಜಿಲ್ಲಾ ಕಾರ್ಯದರ್ಶಿ ಬ್ರ. ಸಲ್ವಾನ್ ಬೋಳಂಗಡಿ, ಪಾಣೆಮಂಗಳೂರು ಶಾಖಾಧ್ಯಕ್ಷ ಬ್ರ. ಮುತಹ್ಹರ್ ಸಾಬ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ