ರಾಜ್ಯದಲ್ಲಿ SIR ಪ್ರಕ್ರಿಯೆ ಮುಕ್ತಾಯ: 1.07 ಕೋಟಿಗೂ ಹೆಚ್ಚು ಮತದಾರರು ಪಟ್ಟಿಯಿಂದ ಹೊರಗೆ! - Mahanayaka
2:05 PM Thursday 10 - September 2026

ರಾಜ್ಯದಲ್ಲಿ SIR ಪ್ರಕ್ರಿಯೆ ಮುಕ್ತಾಯ: 1.07 ಕೋಟಿಗೂ ಹೆಚ್ಚು ಮತದಾರರು ಪಟ್ಟಿಯಿಂದ ಹೊರಗೆ!

sir.jpg
19/08/2026

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 1.07 ಕೋಟಿಗೂ ಅಧಿಕ ಮತದಾರರು ಪಟ್ಟಿಯಿಂದ ಹೊರಬಿದ್ದಿದ್ದಾರೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ಜೂನ್ 30ರಿಂದ ಆಗಸ್ಟ್ 17ರವರೆಗೆ ರಾಜ್ಯಾದ್ಯಂತ ಮನೆ ಮನೆಗೆ ತೆರಳಿ ಮತದಾರರ ಪರಿಶೀಲನೆ ನಡೆಸಲಾಗಿತ್ತು. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ಮತದಾರರ ಪೈಕಿ 1,07,96,415 ಮತದಾರರನ್ನು (ಶೇ. 19.48) ಎಎಸ್ ಡಿಡಿಒ (ASDDO – ನಾಪತ್ತೆ, ಸ್ಥಳಾಂತರ, ಮೃತ, ನಕಲಿ ಮತ್ತು ಇತರೆ) ವರ್ಗದಲ್ಲಿ ದಾಖಲಿಸಲಾಗಿದೆ.

ವಿವರವಾದ ಅಂಕಿ–ಅಂಶಗಳು:

ಶಾಶ್ವತವಾಗಿ ಸ್ಥಳಾಂತರಗೊಂಡವರು: 65,45,721 (11.81%)
ಮೃತಪಟ್ಟವರು: 16,39,871
ಪತ್ತೆಯಾಗದವರು / ಗೈರಾದವರು: 15,17,056 (2.74%)
ನಕಲಿ / ಈಗಾಗಲೇ ನೋಂದಾಯಿತರು: 7,09,875 (1.28%)
ಫಾರ್ಮ್ ಗಳಿಗೆ ಸಹಿ ಮಾಡಲು ಇಚ್ಛಿಸದವರು: 3,83,892 (0.71%)

ಬೆಂಗಳೂರಿನಲ್ಲೇ ಅಧಿಕ:

ರಾಜ್ಯದ ಒಟ್ಟು ASDDO ಮತದಾರರ ಪೈಕಿ ಶೇಕಡಾ 46.88ರಷ್ಟು ಜನ ಬೆಂಗಳೂರಿನ ನಾಲ್ಕು ಜಿಲ್ಲೆಗಳಲ್ಲೇ ಇದ್ದಾರೆ. ಬಿಬಿಎಂಪಿ ದಕ್ಷಿಣ ಭಾಗದಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದ ಮತದಾರರು ಹೊರಬಿದ್ದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti