ಪ್ರಜ್ವಲ್ ರೇವಣ್ಣ ಎಲ್ಲಿ ಇದ್ದಾನೆ ಎಂದು ಎಸ್‌ ಐಟಿಗೆ ಗೊತ್ತಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ - Mahanayaka

ಪ್ರಜ್ವಲ್ ರೇವಣ್ಣ ಎಲ್ಲಿ ಇದ್ದಾನೆ ಎಂದು ಎಸ್‌ ಐಟಿಗೆ ಗೊತ್ತಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

g parameshwar
15/05/2024


Provided by

ಬೆಂಗಳೂರು:   ಪೆನ್ ಡ್ರೈವ್ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಲ್ಲಿ ಇದ್ದಾನೆ ಎಂದು ಎಸ್‌ ಐಟಿಗೆ ಗೊತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಎಸ್‌ ಐಟಿ ತನಿಖೆಯ ವೇಳೆ ನಾವು ಯಾವುದನ್ನು ಹೇಳಲು ಆಗುವುದಿಲ್ಲ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.

ಇನ್ನೂ ಪ್ರಜ್ವಲ್ ಪ್ರಕರಣದ ಹಿಂದೆ ದೊಡ್ಡ ತಿಮಿಂಗಲ ಇದೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,  ಹಾಗಾದರೆ ತಿಮಿಂಗಲ ಯಾರು ಅಂತ ಕುಮಾರಸ್ವಾಮಿಗೆ ಗೊತ್ತಿದೆ. ಅದನ್ನು ಹೇಳದೇ ಇರುವುದೇ ದೊಡ್ಡ ತಪ್ಪಲ್ವಾ? ತಿಮಿಂಗಲ ಯಾರು ಅಂತ ಹೆಚ್.ಡಿ.ಕುಮಾರಸ್ವಾಮಿ ಹೇಳಿ ಬಿಡಲಿ. ಪ್ರಜ್ವಲ್ ಎಲ್ಲಿದ್ದಾನೆ ಎಂದು ನಿಮಗೆ ಏನಾದರೂ ಗೊತ್ತಿದೆಯಾ? ಗೊತ್ತಿದ್ದರೆ ಹೇಳಿ ನಮಗೂ ಸ್ವಲ್ಪ ಸಹಾಯ ಆಗುತ್ತದೆ ಎಂದು ತಿರುಗೇಟು ನೀಡಿದರು.

ಪ್ರಜ್ವಲ್ ಪ್ರಕರಣ ಸಂಬಂಧ ಸಾಹಿತಿಗಳು ಬರೆದ ಪತ್ರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬರೆದ ಪತ್ರವನ್ನು ತರಿಸಿಕೊಂಡು ಓದುತ್ತೇನೆ ಎಂದು ಇದೇ ವೇಳೆ ಅವರು ಹೇಳಿದರು.

ಪ್ರಜ್ವಲ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಅವರು ಉಲ್ಲೇಖ ಮಾಡಿದ್ದನ್ನು ಎಸ್‌ ಐಡಿ ಪರಿಗಣಿಸುತ್ತದೆ ಸಿಎಂ ಜೊತೆಗೆ ಹೇಳುವ ವಿಚಾರ ಏನು ಇಲ್ಲ. ಸಿಎಂ ಕಡೆಯಿಂದ ಕೆಲಸ ಸೂಚನೆ ಇದೆ ಆದರೆ ಹೇಳಲು ಆಗುವುದಿಲ್ಲ ಎಂದು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ