4:22 PM Wednesday 15 - October 2025

ಮತ್ತೊಮ್ಮೆ ಚಿನ್ನಯ್ಯನ ಹೇಳಿಕೆ ಪಡೆಯಲು ಮುಂದಾದ ಎಸ್ ಐಟಿ ಅಧಿಕಾರಿಗಳು!

c n chinnaiah
15/10/2025

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಚಿನ್ನಯ್ಯನ ಹೇಳಿಕೆ ಮತ್ತೊಮ್ಮೆ ಪಡೆಯಲು ಎಸ್ ಐಟಿ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ತಾನು ಪೊಲೀಸರ ಸಮ್ಮುಖದಲ್ಲಿ 10ಕ್ಕೂ ಹೆಚ್ಚು ಮೃತದೇಹಗಳನ್ನ ಹೂತು ಹಾಕಿದ್ದೇನೆ ಎಂದು ಚಿನ್ನಯ್ಯ ಇತ್ತೀಚೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೇಳಿಕೆ  ನೀಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ  ಹೆಚ್ಚಿನ ಮಾಹಿತಿ ಸಂಗ್ರಹಿಸಲು ಆತನ ಹೇಳಿಕೆ ದಾಖಲಿಸಲು ಎಸ್ ಐಟಿ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯನ ಪತ್ನಿ, ಸಹೋದರಿ ಸೇರಿದಂತೆ ಹಲವರ ಹೇಳಿಕೆಯನ್ನು ಎಸ್ ಐಟಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಅಧಿಕಾರಿಗಳು ಚಿನ್ನಯ್ಯನ ಹೇಳಿಕೆ ದಾಖಲಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಇಂದು ಎಸ್ ಐಟಿ ಅಧಿಕಾರಿಗಳು ಈ ಬಗ್ಗೆ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚಿನ್ನಯ್ಯನ ಹೇಳಿಕೆ ಒಂದಕ್ಕೊಂದು ತಾಳೆಯಾಗದಿರುವ ಬಗ್ಗೆ ಮಾಹಿತಿಗಳಿವೆ, ಹೀಗಾಗಿ ಎಸ್ ಐಟಿ ಅಧಿಕಾರಿಗಳು ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version