ಎಸ್ ಐಟಿ, ಸಿದ್ದರಾಮಯ್ಯ, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಎಸ್ ಐಟಿ ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಯಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ? ಎಂದು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಜ್ವಲ್ ಪ್ರಕರಣದಲ್ಲಿ 16 ವರ್ಷ ವಯಸ್ಸಿನ ಬಾಲಕಿಯೂ ಸಂತ್ರಸ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಹಿರಂಗವಾಗಿ ಹೇಳಿದ್ದಾರೆ. ಯಾವ ಆಧಾರದ ಮೇಲೆ ರಾಹುಲ್ ಗಾಂಧಿ ಆ ಹೇಳಿಕೆ ನೀಡಿದರು? ಆ ಬಗ್ಗೆ ಎಸ್ ಐಟಿ ಯಾಕೆ ಇನ್ನೂ ತನಿಖೆ ಮಾಡಿಲ್ಲ? ಎಂದು ಅವರು ಪ್ರಶ್ನಿಸಿದರು.
2,900 ಕೇಸ್ ಇದೆ ಎಂದು ಹೇಳುತ್ತಿದ್ದಾರೆ. ಆದರೂ ಯಾವ ಸಂತ್ರಸ್ತೆಯರೂ ಸಿಗುತ್ತಿಲ್ಲ ಎಂದು ಒದ್ದಾಡುತ್ತಿದ್ದಾರೆ. ಆ ಸಂತ್ರಸ್ತೆಯರಿಗೆ ಏನು ಸ್ಥೈರ್ಯ ತುಂಬುತ್ತೀರಿ ನೀವು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಾನು ಪ್ರಜ್ವಲ್ ರೇವಣ್ಣರನ್ನ ವಹಿಸಿಕೊಂಡು ಮಾತನಾಡುತ್ತಿಲ್ಲ. ಒಂದು ತನಿಖೆ ಪ್ರಾರಂಭ ಮಾಡಿದಾಗ ಮಾಹಿತಿ ಸೋರಿಕೆ ಆಗಬಾರದು. ಸರ್ಕಾರಕ್ಕೆ, ಸಂತ್ರಸ್ತೆಯರಿಗೆ ರಕ್ಷಣೆ ಕೊಡುವುದು ಬೇಕಾಗಿಲ್ಲ. ಈ ಸರ್ಕಾರಕ್ಕೆ ಬೇಕಾಗಿರುವುದು ಕೇವಲ ಪ್ರಚಾರ ಅಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth