ಕುಮಾರಸ್ವಾಮಿಗೆ ಸಂಕಷ್ಟ: ಜಾಮೀನು ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಎಸ್ ‍ಐಟಿ - Mahanayaka
11:58 AM Thursday 12 - December 2024

ಕುಮಾರಸ್ವಾಮಿಗೆ ಸಂಕಷ್ಟ: ಜಾಮೀನು ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಎಸ್ ‍ಐಟಿ

kumaraswamy
01/10/2024

ಬೆಂಗಳೂರು: ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿಯವರ ಜಾಮೀನು ರದ್ದು ಕೋರಿ ಎಸ್ ‍ಐಟಿ ಹೈಕೋರ್ಟ್ ಮೆಟ್ಟಿಲೇರಲು ಮುಂದಾಗಿದೆ.

ಮೂರು ದಿನಗಳ ಹಿಂದಷ್ಟೇ ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದರು. ಇದರ ಬೆನ್ನಲೇ ಎಸ್ ಐಟಿ ಲೋಕಾಯುಕ್ತ ನ್ಯಾಯಾಲಯ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಮೇಲನವಿ ಅರ್ಜಿ ಸಲ್ಲಿಕೆಗೆ ತಯಾರಿ ನಡೆಸಿದೆ.

ಶನಿವಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಕುಮಾರಸ್ವಾಮಿ, ಲೋಕಾಯುಕ್ತ ಡಿವೈಎಸ್ಪಿ ಕವಿತಾ ಮತ್ತು ತನಿಖಾಧಿಕಾರಿಗಳು ಮುಂದಿಟ್ಟ ಕೆಲವು ಪ್ರಶ್ನೆಗಳಿಗೆ ಅಸಮರ್ಪಕ ಉತ್ತರ ನೀಡಿದ್ದಾರೆ ಎನ್ನಲಾಗಿದೆ.

ವಿಚಾರಣೆಗೆ ಅಸಹಕಾರ ತೋರಿದ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನು ರದ್ದು ಕೋರಿ ಮೇಲನವಿ ಸಲ್ಲಿಸಲು ಎಸ್ ಐಟಿ ತೀರ್ಮಾನಿಸಿದೆ. ಈ ಸಂಬಂಧ ಸೋಮವಾರ ಕಾನೂನು ತಜ್ಞರ ಜೊತೆ ಸಾಧಕಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ದ ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಇದು ಕರ್ತವ್ಯಕ್ಕೆ ಅಡ್ಡಿಪಡಿಸುವ ತಂತ್ರವಾಗಿದೆ. ಅವರು ಎಷ್ಟೇ ಆರೋಪ ಮಾಡಿದರೂ ಆರೋಪಿ ಆರೋಪಿಯೇ ಎಂದು ತಿರುಗೇಟು ನೀಡಿದ್ದರು. ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ 2023ರ ಸೆಪ್ಟೆಂಬರ್‌ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ