ಧರ್ಮಸ್ಥಳದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ: ಪ್ರತ್ಯೇಕ ದೂರು ದಾಖಲು: ಎಸ್.ಪಿ. ಡಾ.ಅರುಣ್ ಕೆ.

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಮಾಹಿತಿ ನೀಡಿದ್ದಾರೆ.
ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಈ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಾಗೂ ಉಜಿರೆಯಲ್ಲಿ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ನಡೆದ ಬಗ್ಗೆ ಎರಡು ದೂರುಗಳನ್ನು ಸ್ವೀಕರಿಸಲಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಲಾಗುವುದು ಅಂತ ಅವರು ತಿಳಿಸಿದ್ದಾರೆ.
ಅಲ್ಲದೇ ಪಾಂಗಳ ಹಾಗೂ ಪೊಲೀಸ್ ಠಾಣೆ ಆವರಣದಲ್ಲಿ ಹಾಗೂ ಉಜಿರೆ ಖಾಸಗಿ ಆಸ್ಪತ್ರೆ ಮುಂದೆ ಕಾನೂನು ಬಾಹಿರವಾಗಿ ಗುಂಪು ಸೇರಿದವರ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇನ್ನೂ ಹಲ್ಲೆಗೊಳಗಾಗಿರುವವರ ಬಗ್ಗೆ ವೈದ್ಯರಿಂದ ಮಾಹಿತಿ ಪಡೆಯಲಾಗಿದೆ. ಯಾವುದೇ ಗಂಭೀರ ಗಾಯಗಳಿಲ್ಲ ಅಂತ ವೈದ್ಯರು ತಿಳಿಸಿದ್ದಾರೆ. ಬುಧವಾರ ನಡೆದ ಘಟನೆಯ ವಿಡಿಯೋಗಳನ್ನು ಪರಿಶೀಲನೆ ನಡೆಸಿದ ನಂತರ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD