ಗೋಡೆಯ ಬಿರುಕಿನಲ್ಲಿ ಅಡಗಿದ್ದ 10 ನಾಗರಮರಿ ಮತ್ತು ನಾಗರಹಾವನ್ನು ರಕ್ಷಿಸಿದ ಸ್ನೇಕ್ ಆರೀಫ್
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಸುಂಕಸಾಲೆ ಗ್ರಾ.ಪಂ ವ್ಯಾಪ್ತಿಯ ಕಾಟಿಖಾನ್ ಗ್ರಾಮದ ನಾಗೇಶ್ ಅವರ ಮನೆಯಲ್ಲಿ ಅಡಗಿದ್ದ 10 ನಾಗರಹಾವಿನ ಮರಿ ಮತ್ತು ನಾಗರಹಾವನ್ನು ಹಿಡಿದು ಉರಗಪ್ರೇಮಿ ಸ್ನೇಕ್ ಆರೀಫ್ ಅರಣ್ಯಕ್ಕೆ ಬಿಟ್ಟಿದ್ದಾರೆ.
ಶುಕ್ರವಾರ ಕಾಟಿಖಾನ್ ಗ್ರಾಮದ ನಾಗೇಶ್ ಎಂಬುವವರ ಮನೆಯ ಗೋಡೆಯ ಬಿರುಕಿನಲ್ಲಿ ನಾಗರಹಾವಿನ ಮರಿ ಮತ್ತು ನಾಗರಹಾವು ಕಾಣಿಸಿಕೊಂಡಿದ್ದು ಕೂಡಲೇ ಉರಗಪ್ರೇಮಿ ಸ್ನೇಕ್ ಆರೀಫ್ ಅವರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಅವರು ನಾಗರಹಾವುಗಳನ್ನು ಹಿಡಿದು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























