ಅಂಗನವಾಡಿ ಕೇಂದ್ರದಲ್ಲಿ ಹಾವುಗಳ ಕಾಟ: ಇದು ನಾಗದೋಷ ಅಲ್ಲ, ಅಧಿಕಾರಿಗಳ ಲೋಪ!
ಚಿಕ್ಕಮಗಳೂರು: ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಅಂಗನವಾಡಿ ಕೇಂದ್ರ ತೀರಾ ಶಿಥಿಲಾವಸ್ತೆಯಲ್ಲಿದ್ದು ಕುಸಿಯುವ ತಲುಪಿದೆ.
ಅಂಗನವಾಡಿಯ ದುಃಸ್ಥಿತಿ ಬಗ್ಗೆ ಅನೇಕ ಬಾರಿ ಸ್ಥಳೀಯ ಆಡಳಿತದ ಗಮನ ಸೆಳೆದಿದ್ದರು ಯಾವುದೇ ಪ್ರಯೋಜನ ಆಗಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಅಂಗನವಾಡಿ ಶಿಥಿಲ ಆಗಿರುವುದರಿಂದ ಇಲ್ಲಿಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಸುತ್ತಮುತ್ತ ಪೊದೆಗಳು ಇರುವುದರಿಂದ ಹಾವುಗಳ ಕಾಟವು ಅಧಿಕವಾಗಿದ್ದು ಕಳೆದ ಒಂದು ವಾರದಲ್ಲಿ ಮೂರು ಬಾರಿ ಇಲ್ಲಿ ಹಾವು ಪತ್ತೆಯಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಶಿಥಿಲ ಗೊಂಡ ಕಟ್ಟಡವನ್ನು ದುರಸ್ತಿಪಡಿಸುವ ಬದಲಾಗಿ , ಹೊಸದಾಗಿ ಕಟ್ಟಡವನ್ನು ನಿರ್ಮಿಸಬೇಕು ಅಲ್ಲಿಯವರೆಗೆ , ತಾತ್ಕಾಲಿಕವಾಗಿ ಅಂಗನವಾಡಿ ಕೇಂದ್ರವನ್ನು ಸೂಕ್ತ ಸ್ಥಳಕ್ಕೆ ವರ್ಗಾಯಿಸಬೇಕು ಎನ್ನುವ ಅಭಿಪ್ರಾಯ ಹಲವರದು.
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಈ ನಿಟ್ಟಿನಲ್ಲಿ ಗಮನ ಹರಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth