ಸಾಮಾಜಿಕ ಚಿಂತಕ, ಆಹಾರ ತಜ್ಞ ಕೆ.ಸಿ.ರಘು ಇನ್ನಿಲ್ಲ - Mahanayaka
11:02 AM Tuesday 16 - September 2025

ಸಾಮಾಜಿಕ ಚಿಂತಕ, ಆಹಾರ ತಜ್ಞ ಕೆ.ಸಿ.ರಘು ಇನ್ನಿಲ್ಲ

k c raghu
15/10/2023

ಬೆಂಗಳೂರು: ಸಾಮಾಜಿಕ ಚಿಂತಕ, ಆಹಾರ ತಜ್ಞ ಕೆ.ಸಿ.ರಘು ಅವರು ಇಂದು ಮುಂಜಾನೆ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.


Provided by

ಇಂದು ಬೆಳಗ್ಗೆ ಸುಮಾರು 7:30ರ ವೇಳೆಗೆ ಅವರು ನಿಧನರಾಗಿರೋದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.  ಕೆ.ಸಿ.ರಘು ಅವರ ದಾಸರಳ್ಳಿಯ ಅಮೃತ ನಗರ ನಿವಾಸದಲ್ಲಿ ರಘುರವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಆಹಾರ ತಜ್ಞರಾಗಿ ಅಲ್ಲದೇ, ದೇಶದ ಅರ್ಥ ವ್ಯವಸ್ಥೆ, ಸಾಮಾಜಿಕ ವ್ಯವಸ್ಥೆಗಳ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು. ಇವರ ನಿಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಸತೀಶ್ ಜಾರಕಿಹೊಳಿ ಸಂತಾಪ:

ನಾಡಿನ ಹೆಸರಾಂತ ಚಿಂತಕ, ಆಹಾರ ತಜ್ಞ ಕೆ.ಸಿ. ರಘು ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ

ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞರಾಗಿ, ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೀಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಹಾಗೂ ಆಪ್ತರಿಗೆ ದೊರೆಯಲಿ ಎಂದು ಈ‌ ಮೂಲಕ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ

 

ಇತ್ತೀಚಿನ ಸುದ್ದಿ