ಸೋಲಾರ್ ಬ್ಯಾಟರಿ ಕಳವು: 4 ಬ್ಯಾಟರಿ ಸಹಿತ ಇಬ್ಬರು ಕಳ್ಳರ ಬಂಧನ
ಆರೂರು ಗ್ರಾಮದ ವಿವಿಧ ಕಡೆ ಪಂಚಾಯತ್ ನಿಂದ ಅಳವಡಿಸಿದ್ದ ಸೋಲಾರ್ ದಾರಿ ದೀಪಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಬ್ರಹ್ಮಾವರ ಪೊಲೀಸರು, 24ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಉಪ್ಪೂರು ಗ್ರಾಮದ ಅಮ್ಮುಂಜೆ ನಿವಾಸಿ 24ವರ್ಷದ ಯಜ್ಞೇಶ್ ಹಾಗೂ ಉದ್ಯಾವರ ಸಂಪಿಗೆನಗರ ನಿವಾಸಿ 22ವರ್ಷದ ಪೂರ್ಣೇಶ್ ಆಚಾರ್ಯ ಎಂದು ಗುರುತಿಸಲಾಗಿದೆ. ನ.15ರಂದು ಆರೂರು ಗ್ರಾಮದ ವಿವಿಧ ಕಡೆ ಸೋಲಾರ್ ದಾರಿ ದೀಪಗಳ ಬ್ಯಾಟರಿಗಳನ್ನು ಕಳ್ಳತನ ನಡೆದಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಬ್ರಹ್ಮಾವರ ಪೊಲೀಸರು, ಕಳವು ಮಾಡಿದ ಬ್ಯಾಟರಿಗಳನ್ನು ಬೈಕ್‌ನಲ್ಲಿ ಮಾರಾಟ ಮಾಡಲು ಹೋಗುತ್ತಿದ್ದ ಆರೋಪಿಗಳನ್ಮು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಆರೋಪಿಗಳು ಬ್ಯಾಟರಿ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಅದರಂತೆ ಪೊಲೀಸರು ಆರೋಪಿಗಳಿಂದ ಬೈಕ್ ಹಾಗೂ ಬ್ಯಾಟರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಬೇರೆ ಕಡೆ ಮಾರಾಟ ಮಾಡಲು ಇರಿಸಿದ ಬ್ಯಾಟರಿಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.
ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka