ಹತ್ಯೆ: ಯೋಧನ ಸಹೋದರನನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

22/04/2024
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಯೋತ್ಪಾದಕರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದ ಘಟನೆ ನಡೆದಿದೆ. ಥಾನಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಡಾ ಟಾಪ್ ಗ್ರಾಮದಲ್ಲಿರುವ ಮಸೀದಿಯಿಂದ ಅಬ್ದುಲ್ಲಾ ರಝಾಕ್ ಹೊರಬಂದಾಗ ಈ ಘಟನೆ ನಡೆದಿದೆ. ರಝಾಕ್ ಸಹೋದರ ಪ್ರಾದೇಶಿಕ ಸೇನೆಯಲ್ಲಿ ಸೈನಿಕನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರು ಹತ್ತಿರದಿಂದ ಗುಂಡು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಬೃಹತ್ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth