ರಾಜ್ಯ ಯುವ ಆಯೋಗ ಸ್ಥಾಪನೆಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಒತ್ತಾಯ
ಬೆಂಗಳೂರು: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನ ರಾಜ್ಯ ತಂಡವು ಬೆಂಗಳೂರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಧ್ಯಕ್ಷರು ಹಾಗೂ ಶಾಸಕರಾದ ಎನ್.ಎ.ಹಾರಿಸ್ ಅವರನ್ನು ಭೇಟಿ ಮಾಡಿ, ಕರ್ನಾಟಕದಲ್ಲಿ ರಾಜ್ಯ ಯುವ ಆಯೋಗವನ್ನು ಸ್ಥಾಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿತು.
ಪ್ರಸ್ತಾವಿತ ರಾಜ್ಯ ಯುವ ಆಯೋಗವು ಯುವಕರಿಗೆ ಶಿಕ್ಷಣ, ಸಬಲೀಕರಣ ಹಾಗೂ ಮಾರ್ಗದರ್ಶನ ಒದಗಿಸುವುದರ ಜೊತೆಗೆ, ಯುವಕರ ಹಕ್ಕುಗಳನ್ನು ರಕ್ಷಿಸಿ, ಅವರ ಸಮಸ್ಯೆಗಳು ಹಾಗೂ ಅಗತ್ಯಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ನೋಡಿಕೊಳ್ಳುವ ಉದ್ದೇಶ ಹೊಂದಿರಲಿದೆ.
ಈ ಬೇಡಿಕೆಯನ್ನು ಇನ್ನಷ್ಟು ಬಲಪಡಿಸುವ ಸಲುವಾಗಿ ಮುಂದಿನ ದಿನಗಳಲ್ಲಿ ತಂಡವು ಮಾನ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಇತರ ಪ್ರಮುಖ ಸಚಿವರನ್ನು ಭೇಟಿಯಾಗಲು ನಿರ್ಧರಿಸಿದೆ. ಜೊತೆಗೆ ರಾಜ್ಯದಾದ್ಯಂತ ಇರುವ ಕಾರ್ಯಕರ್ತರು ಈ ಬೇಡಿಕೆಗೆ ಬೆಂಬಲ ಸೂಚಿಸಿ ಮನವಿಪತ್ರಗಳನ್ನು ಸಲ್ಲಿಸಲಿದ್ದಾರೆ.
ಅಸ್ಸಾಂ, ಬಿಹಾರ, ಕೇರಳ ಮತ್ತು ಮಿಜೋರಂ ಮುಂತಾದ ರಾಜ್ಯಗಳಲ್ಲಿ ಈಗಾಗಲೇ ಯುವ ಆಯೋಗಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕದಲ್ಲಿಯೂ ಇಂತಹ ಆಯೋಗ ಸ್ಥಾಪನೆ ಅಗತ್ಯವೆಂಬುದು ಈ ಸಂದರ್ಭದಲ್ಲಿ ಒತ್ತಿ ಹೇಳಲಾಯಿತು.
ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ನ ರಾಜ್ಯಾಧ್ಯಕ್ಷರಾದ ಡಾ. ನಸೀಮ್ ಅಹ್ಮದ್,ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್ ಹಾಗೂ ರಾಜ್ಯ ಕಾರ್ಯದರ್ಶಿ ಅಸಾದುಲ್ಲಾ ಖಾನ್ ಝಕಿ ಅವರು ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























