ಎನ್‌ಡಿಎ ಮೈತ್ರಿಕೂಟದ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ ಸ್ಪೋಟಕ ಹೇಳಿಕೆ

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಲೋಕಸಭಾ ಸಂಖ್ಯಾಬಲವು ತುಂಬಾ
ಚಂಚಲವಾಗಿದೆ ಎಂದು ಪ್ರತಿಪಾದಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎನ್‌ಡಿಎ ಮೈತ್ರಿಕೂಟದ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ ಹಾಗೂ ಮೋದಿ ಪಾಳಯದಲ್ಲಿ ತೀವ್ರ ಅಸಮಾಧಾನವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
Financial Times ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ರಾಹುಲ್ ಗಾಂಧಿ ‘ಸಣ್ಣ ಸಮಸ್ಯೆಯಾದರೂ ಸರಕಾರ ಪತನವಾಗಲಿದೆ’ ಎಂದು ಭವಿಷ್ಯ ನುಡಿದಿದ್ದಾರೆ.
2014 ಹಾಗೂ 2019ರಲ್ಲಿ ನರೇಂದ್ರ ಮೋದಿ ಪರ ಕೆಲಸ ಮಾಡಿದ್ದ ವಿಷಯವು ಈ ಬಾರಿ ನಡೆಯದೆ ಇರುವುದರಿಂದ, ಆಡಳಿತಾರೂಢ ಮೈತ್ರಿ ಸರಕಾರ ಪರದಾಡಲಿದೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಆಗಿರುವ ಲಾಭಗಳ ಕುರಿತು, “ಭಾರತೀಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಯಾಗಿದೆ” ಎಂದು ಅವರು ವ್ಯಾಖ್ಯಾನಿಸಿದ್ದಾರೆ. “ಮೋದಿ ಪರಿಕಲ್ಪನೆ ಹಾಗೂ ಮೋದಿ ವರ್ಚಸ್ಸನ್ನು ನಾಶಗೊಳಿಸಲಾಗಿದೆ” ಎಂದೂ ಅವರು ಹೇಳಿಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth