ಗುಂಡಿಕ್ಕಿದ ಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ನಾಯಕನ ಪುತ್ರನ ಮೃತದೇಹ ಪತ್ತೆ - Mahanayaka

ಗುಂಡಿಕ್ಕಿದ ಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ನಾಯಕನ ಪುತ್ರನ ಮೃತದೇಹ ಪತ್ತೆ

14/11/2020

ಬುಲಂದ್ ಶಹರ್: ಉತ್ತರಪ್ರದೇಶ ಬಿಜೆಪಿಯ ಹಿರಿಯ ನಾಯಕರೊಬ್ಬರ ಪುತ್ರನ ಮೃತದೇಹವು ಗುಂಡುಕ್ಕಿದ ಸ್ಥಿತಿಯಲ್ಲಿ  ಆತನ ಮನೆಯಲ್ಲಿಯೇ ಪತ್ತೆಯಾಗಿದ್ದು,  ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

 ಜೆವಾರ್ ನಿಂದ ಮೂರು ಬಾರಿ ಶಾಸಕರಾದ ಹೊರಮ್ ಸಿಂಗ್ ಅವರ ಪುತ್ರ ಮಹೇಶ್ ಅವರು ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಶನಿವಾರ ಬೆಳಗ್ಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ತಿಳಿದು ಬಂದಿದೆ. ಈ ಸಾವಿನ ಬಗ್ಗೆ ಯಾವುದೇ ಅನುಮಾನದ ದೂರುಗಳ ಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಇನ್ಸ್ ಪೆಕ್ಟರ್ ಕೊಟ್ಟಾಲಿ ಎಂ.ಕೆ.ಉಪಾಧ್ಯಾಯ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ