ಎರಡು ವರ್ಷಗಳ ಹಿಂದೆ ತಂದೆಯನ್ನೇ ಹತ್ಯೆಗೈದಿದ್ದ ಮಗನಿಗೆ ಜೀವಾವಧಿ ಶಿಕ್ಷೆ

prajoth shetty
22/02/2023

ತಂದೆಯನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ್ದ ಮಗನಿಗೆ ಉಡುಪಿ ಎರಡನೇ ಹೆಚ್ಚುನವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಪೆರಂಪಳ್ಳಿ ಭಂಡಾರಮನೆ ನಿವಾಸಿ ಪ್ರಜೋತ್ ಶೆಟ್ಟಿ(50) ಜೀವಾವಧಿ ಶಿಕ್ಷೆಗೆ ಗುರಿಯಾದ ಮಗನಾಗಿದ್ದಾನೆ. ಈತ  2020ರ ನ.13ರಂದು ತನ್ನ ತಂದೆ ಕುಡಿಯಲು ಹಣ ನೀಡಲಿಲ್ಲ, ಆಸ್ತಿ ಪಾಲು ಕೊಡಲಿಲ್ಲ ಎಂಬ ಕಾರಣಕ್ಕಾಗಿ ತಂದೆ ಮಹಾಬಲ ಶೆಟ್ಟಿ(82) ಎಂಬವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಲ್ಲದೆ, ಬಿಡಿಸಲು ಬಂದ ತಾಯಿ ಆಶಾಲತಾ ಶೆಟ್ಟಿ(76) ಎಂಬವರಿಗೆ ಕೈಯಿಂದ ಹಲ್ಲೆ ನಡೆಸಿದ್ದನು.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ನ.14ರಂದು ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ತನಿಖೆ ನಡೆಸಿದ ಆಗಿನ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್ ವಿ. ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 35ಸಾಕ್ಷಿಗಳ ಪೈಕಿ 25ಸಾಕ್ಷಿಗಳನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ದಿನೇಶ್ ಹೆಗಡೆ, ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ಆರೋಪಿಗೆ 302 ಕೊಲೆ ಪ್ರಕರಣದಡಿ ಜೀವಾವಧಿ ಜೈಲುಶಿಕ್ಷೆ ಹಾಗೂ 10ಸಾವಿರ ದಂಡ ಮತ್ತು 323 ಕೈಯಿಂದ ಹಲ್ಲೆ ನಡೆಸಿದ ಪ್ರಕರಣದಡಿ 3 ತಿಂಗಳ ಸಾದಾ ಸಜೆ ವಿಧಿಸಿ ಆದೇಶ ನೀಡಿದರು. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಜಯರಾಮ್ ಶೆಟ್ಟಿ ವಾಧಿಸಿದ್ದರು

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version