ತಂದೆಯನ್ನು ಅಟ್ಟಾಡಿಸಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಮಗ! - Mahanayaka

ತಂದೆಯನ್ನು ಅಟ್ಟಾಡಿಸಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಮಗ!

police
27/02/2024

ಮಂಡ್ಯ: ಆಸ್ತಿ ವಿಚಾರಕ್ಕೆ ತಂದೆಯನ್ನು ಅಟ್ಟಾಡಿಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಮಗನೇ ಹತ್ಯೆ ಮಾಡಿರುವ ಘಟನೆ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಂಜಪ್ಪ(65) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಮಹದೇವ ಎಂಬಾತ ತಂದೆಯನ್ನೇ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.

ತಂದೆ ಮಗಳ ಹೆಸರಿಗೆ ಆಸ್ತಿಯನ್ನು ಬರೆದಿರುವುದರಿಂದ ಕೋಪಗೊಂಡು ಪುತ್ರ ಗಲಾಟೆ ಆರಂಭಿಸಿದ್ದು, ತಂದೆಯನ್ನು ಅಮಾನವೀಯವಾಗಿ ಅಟ್ಟಾಡಿಸಿ ಥಳಿಸಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನೂ ತಂದೆಯನ್ನು ಥಳಿಸದಂತೆ ಅಡ್ಡಬಂದ ತಾಯಿಗೂ ಮಹದೇವ ಹಲ್ಲೆ ನಡೆಸಿದ್ದು, ಅವರಿಗೂ ಗಾಯಗಳಾಗಿವೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ