ಹವಾಮಾನ ವೈಪರೀತ್ಯ: ಭೋಪಾಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಸೋನಿಯಾ, ರಾಹುಲ್ ಗಾಂಧಿ ವಿಮಾನ - Mahanayaka
9:01 PM Saturday 18 - October 2025

ಹವಾಮಾನ ವೈಪರೀತ್ಯ: ಭೋಪಾಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಸೋನಿಯಾ, ರಾಹುಲ್ ಗಾಂಧಿ ವಿಮಾನ

18/07/2023

ಹವಾಮಾನ ವೈಪರೀತ್ಯದಿಂದಾಗಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಮಧ್ಯಪ್ರದೇಶದ ಭೋಪಾಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Provided by

26 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದ ಎರಡು ದಿನಗಳ ರಾಜಕೀಯ ಅಧಿವೇಶನದ ನಂತರ ವಿಮಾನವು ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿತ್ತು. ಪ್ರತಿಪಕ್ಷ ನಾಯಕರ ಮಹಾ ಮೈತ್ರಿಕೂಟವನ್ನು ಐ.ಎನ್.ಡಿ.ಐ.ಎ ಎಂದು ಹೆಸರಿಸಲಾಯಿತು.

ವಿಮಾನವು ರಾತ್ರಿ 9:30 ರ ಸುಮಾರಿಗೆ ಮುಂದಿನ ಪ್ರಯಾಣಕ್ಕಾಗಿ ಹೊರಡುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
‘ತುರ್ತು ಲ್ಯಾಂಡಿಂಗ್ ಬಗ್ಗೆ ಮಾಹಿತಿ ಪಡೆದ ನಂತರ ನಾವು ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದೇವೆ’ ಎಂದು ಹಿರಿಯ ಕಾಂಗ್ರೆಸ್ ನಾಯಕಿ ಶೋಭಾ ಓಜಾ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ