ಪರಪ್ಪನ ಅಗ್ರಹಾರ ಜೈಲಿನಿಂದ ಸೋನು ಶ್ರೀನಿವಾಸ್ ಗೌಡ ರಿಲೀಸ್! - Mahanayaka
12:36 PM Monday 15 - September 2025

ಪರಪ್ಪನ ಅಗ್ರಹಾರ ಜೈಲಿನಿಂದ ಸೋನು ಶ್ರೀನಿವಾಸ್ ಗೌಡ ರಿಲೀಸ್!

sonu srinivas gowda
07/04/2024

ಬೆಂಗಳೂರು: ಬಾಲಕಿಯನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಮೇಲೆ ಜೈಲು ಸೇರಿದ್ದ ಸೋನು ಶ್ರೀನಿವಾಸ ಗೌಡ ಅವರಿಗೆ ಜಾಮೀನು ದೊರಕಿದ್ದು, ಇದೀಗ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದಿದ್ದಾರೆ.


Provided by

ಬಾಲಕಿಯನ್ನು ಅಕ್ರಮವಾಗಿ ದತ್ತು ಪಡೆದ ಆರೋಪದಲ್ಲಿ ಸೋನು ಶ್ರೀನಿವಾಸ್ ಗೌಡ ಅವರನ್ನು  ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಹೀಗಾಗಿ  14 ದಿನಗಳ ಕಾಲ ಪರಪ್ಪನ ಅಗ್ರಹಾರದಲ್ಲಿ ಕಳೆದಿದ್ದ ಸೋನು ಶ್ರೀನಿವಾಸ್ ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಅವರು ನೀಡಿದ್ದ ದೂರಿನ ಆಧಾರದಲ್ಲಿ ಮಾರ್ಚ್ 22ರಂದು ಸೋನು ಶ್ರೀನಿವಾಸ್ ವಿರುದ್ಧ ಎಫ್ ಐಆರ್ ದಾಖಲಿಸಿ ಬಂಧಿಸಲಾಗಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ