ಸೋನು ಶ್ರೀನಿವಾಸ ಗೌಡ ಅರೆಸ್ಟ್: ಕಾರಣ ಏನು? ಇಲ್ಲಿದೆ ಮಾಹಿತಿ

ಬೆಂಗಳೂರು: ಹಲವು ವಿವಾದಗಳಿಗೆ ಕಾರಣವಾಗುತ್ತಿರುವ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಶ್ರೀನಿವಾಸ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬಿಗ್ ಬಾಸ್ ಒಟಿಟಿ ಸೀಸನ್ ನಲ್ಲಿ ಸೋನು ಶ್ರೀನಿವಾಸ್ ಗೌಡ ಭಾಗಿಯಾಗಿದ್ದರು. ಇದಾದ ಬಳಿಕ ಇತ್ತೀಚೆಗಷ್ಟೇ ಮಗುವೊಂದನ್ನು ದತ್ತುಪಡೆದುಕೊಂಡಿರುವುದಾಗಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ನೀಡಿದ್ದರು.
ಆದ್ರೆ, ಅವರು ಕಾನೂನು ಬಾಹಿರವಾಗಿ ಮಗುವನ್ನು ದತ್ತುಪಡೆದಿದ್ದಾರೆ ಎಂಬ ಆರೋಪದ ಮೇರೆಗೆ ಸೋನುಶ್ರೀನಿವಾಸ ಗೌಡ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ. 6ರಿಂದ 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಸೋನು ದತ್ತುಪಡೆದುಕೊಂಡಿದ್ದರು.
ಈ ವಿಚಾರವಾಗಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಅವರು ದೂರು ನೀಡಿದ್ದು, ಈ ಸಂಬಂಧ ಎಫ್ ಐಆರ್ ದಾಖಲಿಸಿದ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth