ಗ್ರಾ.ಪಂ. ಚುನಾವಣೆ: ಸೋತ ಅಭ್ಯರ್ಥಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ - Mahanayaka

ಗ್ರಾ.ಪಂ. ಚುನಾವಣೆ: ಸೋತ ಅಭ್ಯರ್ಥಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

04/01/2021

ಯಾದಗಿರಿ:  ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.  ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಾಮುನಾಯಕ ತಾಂಡಾದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.


Provided by

ಕೇಮು ನಾಯಕ(55) ಹತ್ಯೆಯಾದ ವ್ಯಕ್ತಿಯಾಗಿದ್ದು, ಇವರು ತಾಂಡಾದ ನಿವಾಸಿ ಎಂದು ತಿಳಿದು ಬಂದಿದೆ. ಕಲ್ಲು, ಬಡಿಗೆಯಿಂದ ಹೊಡೆದು ಕೇಮು ನಾಯಕ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೇಮು ನಾಯಕ ಹಾಗೂ ಹತ್ಯೆ ಆರೋಪಿ ಇಬ್ಬರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ನಾನು ಸೋಲಲು ನೀನು ಕಾರಣ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ  ನಡೆದಿತ್ತು ಎಂದು ಹೇಳಲಾಗಿದೆ.

ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಲ್ಲಿ ಬಿದ್ದಿದ್ದ ಕೇಮು ನಾಯಕ ಅವರನ್ನು ಆಸ್ಪತ್ರೆಗೆ ತಕ್ಷಣ ಸಾಗಿಸಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಘಟನೆ ಸಂಬಂಧ ಗೋಗಿ ಠಾಣಾ ಪೊಲೀಸರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ