ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ: ತನ್ನ ಹೆಸರು ಎಳೆದು ತಂದವರಿಗೆ ಶಾಕ್ ನೀಡಿದ ಸೌರವ್ ಗಂಗೂಲಿ
ಲಯೊನೆಲ್ ಮೆಸ್ಸಿ ಅವರ ಕೋಲ್ಕತ್ತಾ ಪ್ರವಾಸದ ವೇಳೆ ಉಂಟಾದ ಅವ್ಯವಸ್ಥೆಗೆ ಸಂಬಂಧಿಸಿದಂತೆ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಫುಟ್‌ಬಾಲ್ ಅಧಿಕಾರಿಯೊಬ್ಬರ ವಿರುದ್ಧ ₹50 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಘಟನೆಯ ವಿವರ: ಇತ್ತೀಚೆಗೆ ಅರ್ಜೆಂಟೀನಾದ ಫುಟ್‌ಬಾಲ್ ತಾರೆ ಲಯೊನೆಲ್ ಮೆಸ್ಸಿ ಅವರು ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ಕ್ರೀಡಾಂಗಣದಲ್ಲಿ ಭಾರಿ ಗದ್ದಲ ಮತ್ತು ಅವ್ಯವಸ್ಥೆ ಉಂಟಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ‘ಅರ್ಜೆಂಟಿನಾ ಫುಟ್ ಬಾಲ್ ಕ್ಲಬ್’ನ ಉತ್ತಮ್ ಸಾಹಾ ಅವರು ಸೌರವ್ ಗಂಗೂಲಿ ಅವರ ಹೆಸರನ್ನು ಎಳೆದು ತಂದಿದ್ದರು.
ಈ ಕಾರ್ಯಕ್ರಮದ ನಿಜವಾದ ರೂವಾರಿ ಗಂಗೂಲಿ ಅವರೇ ಆಗಿದ್ದಾರೆ ಎಂದು ಸಾಹಾ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಗಂಗೂಲಿ, “ಯಾವುದೇ ಆಧಾರವಿಲ್ಲದೆ ನನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡಲಾಗಿದೆ. ಇದು ನನ್ನ ಖ್ಯಾತಿ ಮತ್ತು ಮಾನಸಿಕ ನೆಮ್ಮದಿಗೆ ಧಕ್ಕೆ ತಂದಿದೆ” ಎಂದು ಕಿಡಿಕಾರಿದ್ದಾರೆ.
ಈ ಹಿನ್ನೆಲೆಯಲ್ಲಿ ಗಂಗೂಲಿ ಅವರು ಉತ್ತಮ್ ಸಾಹಾ ವಿರುದ್ಧ ₹50 ಕೋಟಿ ಮಾನನಷ್ಟ ದಾವೆ ಹೂಡಿದ್ದು, ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ, ಕೋಲ್ಕತ್ತಾ ಸೈಬರ್ ಪೊಲೀಸರಿಗೂ ಇ-ಮೇಲ್ ಮೂಲಕ ದೂರು ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























