ಕೊನೆಗೂ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರನ್ನು ತಲುಪಿದ ಗಗನಾಯಾತ್ರಿಗಳ ತಂಡ: ಭೂಮಿಗೆ ಮರಳಲು ಕ್ಷಣಗಣನೆ

sunita williams
16/03/2025

ಯುನೈಟೆಡ್ ಸ್ಟೇಟ್ಸ್:  ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ 9 ತಿಂಗಳಿಗಿಂತಲೂ ಹೆಚ್ಚು ಕಾಲ ಸಿಲುಕಿದ್ದ ಗಗನ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು  ಭೂಮಿಗೆ ಮರಳಲು ಕ್ಷಣಗಣನೆ ಆರಂಭಗೊಂಡಿದೆ.

ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾತ್ರಿಗಳನ್ನು ಕರೆತರಲು ತೆರಳಿದ್ದ ತಂಡವು  ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದ್ದು, ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಸಂಧಿಸಿದೆ. ಈ ಸಂಬಂಧ ಲೈವ್ ಟಿವಿಯಲ್ಲಿ ದೃಶ್ಯಗಳನ್ನು ತೋರಿಸಲಾಗಿದೆ.

ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್  ಅವರನ್ನು ಬಾಹ್ಯಾಕಾಶ ನಿಲ್ದಾಣದಲ್ಲಿ ಭೇಟಿ ಮಾಡಿದ ಕಾರ್ಯಾಚರಣೆ ತಂಡ ಶೂನ್ಯ ಗುರುತ್ವಾಕರ್ಷಣೆಯಲ್ಲಿ ತಮ್ಮ ಸಹವರ್ತಿಗಳನ್ನು ಪರಸ್ಪರ ಅಪ್ಪಿಕೊಂಡು ಶುಭಾಶಯಗಳನ್ನು ತಿಳಿಸುತ್ತಿರುವ ದೃಶ್ಯವನ್ನು ಬಿಡುಗಡೆ ಮಾಡಲಾಗಿದೆ.

ಗಗನಾಯಾತ್ರಿಗಳನ್ನು ಮರಳಿ ಭೂಮಿಗೆ ತರುವ ಕಾರ್ಯಾಚರಣೆಯಲ್ಲಿ ನಾಸಾದ ತಂಡದಲ್ಲಿ ಅನ್ ಮೆಕ್ ಕ್ಲೇನ್ ಮತ್ತು ನಿಕೋಲ್ ಅಯರ್ಸ್, ಜಪಾನ್ ನ ಟಕುಯಾ ಒನಿಶಿ ಮತ್ತು ರಷ್ಯಾದ ಕಿರಿಲ್ ಪೆಸ್ಕೋವ್ ಅವರು ಭಾಗಿಯಾಗಿದ್ದಾರೆ. ಈ ಕಾರ್ಯಾಚರಣೆಯು ಭವಿಷ್ಯದ ವಿಜ್ಞಾನದ ಬೆಳವಣಿಗೆ ಸಹಕಾರಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ

Exit mobile version