ವಿಧಾನ ಮಂಡಲ, ವಿಧಾನಸಭೆಯ ಸ್ಥಾಯಿ ಸಮಿತಿಗಳ ಸಭೆಗೆ ಸ್ಪೀಕರ್ ಅನುಮತಿ - Mahanayaka
11:49 PM Saturday 23 - August 2025

ವಿಧಾನ ಮಂಡಲ, ವಿಧಾನಸಭೆಯ ಸ್ಥಾಯಿ ಸಮಿತಿಗಳ ಸಭೆಗೆ ಸ್ಪೀಕರ್ ಅನುಮತಿ

u t khadar
15/05/2024


Provided by

ಬೆಂಗಳೂರು: ಪ್ರಸಕ್ತ ಲೋಕಸಭೆಯ ಎರಡು ಹಂತದ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅನುಮತಿ ನೀಡಿದ್ದಾರೆ.

ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮಾರ್ಚ್‌ 21ರಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ವಿಧಾನ ಮಂಡಲದ/ ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸದಂತೆ ಸಭಾಧ್ಯಕ್ಷರು ಶಾಸಕರಿಗೆ ಪ್ರಕಟಣೆ ಮೂಲಕ ತಿಳಿಸಿದ್ದರು.

ರಾಜ್ಯದಲ್ಲಿ ಎರಡು ಹಂತಗಳ ಚುನಾವಣೆಯ ಮತದಾನ ಮುಕ್ತಾಯವಾಗಿರುವುದರಿಂದ ಸಮಿತಿಗಳ ಸಭೆಗಳನ್ನು ನಡೆಸಲು ಸಭಾಧ್ಯಕ್ಷರು ಶಾಸಕರಿಗೆ ಅನುಮತಿ ನೀಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ