ಶಾಸಕ ಜಿ.ಹೆಚ್. ಶ್ರೀನಿವಾಸ್ ಗೆ ಸಚಿವ ಸ್ಥಾನಕ್ಕಾಗಿ ಕೇರಳದಲ್ಲಿ ವಿಶೇಷ ಪೂಜೆ
ಚಿಕ್ಕಮಗಳೂರು: ತರೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಸಿಗಲೆಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಕೇರಳದ ಪ್ರಸಿದ್ಧ ಕೊಟ್ಟಿಯೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಅಜ್ಜಂಪುರ ತಾಲೂಕಿನ ಶಾಸಕರ ಅಭಿಮಾನಿ ಬಳಗವು ಕೇರಳದ ಕೊಟ್ಟಿಯೂರಿಗೆ ತೆರಳಿ ಈ ಪೂಜೆ ನೆರವೇರಿಸಿದೆ. ಜಿ.ಹೆಚ್. ಶ್ರೀನಿವಾಸ್ ಅವರು ತರೀಕೆರೆ ವಿಧಾನಸಭಾ ಕ್ಷೇತ್ರದಿಂದ ಈಗಾಗಲೇ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಇವರೊಂದಿಗೆ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಕೂಡ ಎರಡು ಬಾರಿ ಗೆದ್ದ ಅನುಭವ ಹೊಂದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯವರನ್ನೇ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು ಎಂಬುದು ಕ್ಷೇತ್ರದ ಜನರ ಪ್ರಬಲ ಆಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ಎರಡು ಬಾರಿ ಗೆದ್ದಿರುವ ಜಿ.ಹೆಚ್. ಶ್ರೀನಿವಾಸ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ, ಜಿಲ್ಲೆಯ ಉಸ್ತುವಾರಿಯನ್ನು ವಹಿಸಿಕೊಡಬೇಕು ಎಂದು ಒತ್ತಾಯಿಸಿ ಅಭಿಮಾನಿಗಳು ಹಾಗೂ ಕ್ಷೇತ್ರದ ಸಾರ್ವಜನಿಕರು ಈ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























