ಉಡುಪಿಯಲ್ಲಿ‌ ನಾಲ್ವರ ಹತ್ಯೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಹಾಕಿದ ವ್ಯಕ್ತಿಯ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು - Mahanayaka

ಉಡುಪಿಯಲ್ಲಿ‌ ನಾಲ್ವರ ಹತ್ಯೆ ಪ್ರಕರಣ: ಪ್ರಚೋದನಕಾರಿ ಪೋಸ್ಟ್ ಹಾಕಿದ ವ್ಯಕ್ತಿಯ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

hafeez
20/11/2023


Provided by

ಉಡುಪಿ: ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಶಿವಮೊಗ್ಗದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ

ಹಫೀಝ್ ಮುಹಮ್ಮದ್ ಎಂಬಾತನು ತನ್ನ ಫೇಸ್ಬುಕ್ ಖಾತೆಯಲ್ಲಿ ಇತ್ತೀಚಿಗೆ  ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ಕು ಕೊಲೆಗಳ ಆರೋಪಿಯ ಬಗ್ಗೆ “ಪ್ರಿಪ್ರೇಶನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು “ ಎಂಬ ಪೋಸ್ಟ್ ನ್ನು ಹಾಕಿದ್ದನು.

ಈತ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಜೀವಾವಧಿ ಶಿಕ್ಷೆಯಂತಹ ಅಪರಾಧವನ್ನು ಮಾಡಲು ಪ್ರಚೋದನೆ ನೀಡಿ  ವಿವಿಧ ವರ್ಗಗಳ ನಡುವೆ ದ್ವೇಷ ಸೃಷ್ಟಿಸುವ ಉದ್ದೇಶ ಹೊಂದಿರುವುದಾಗಿ ದೂರಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ಇತ್ತೀಚಿನ ಸುದ್ದಿ