ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾಳೆ ಶೃಂಗೇರಿ ಬಂದ್: ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ತಾಲೂಕು ಸಂಪೂರ್ಣ ಸ್ಥಬ್ಧ! - Mahanayaka
6:04 AM Tuesday 10 - November 2026

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾಳೆ ಶೃಂಗೇರಿ ಬಂದ್: ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ತಾಲೂಕು ಸಂಪೂರ್ಣ ಸ್ಥಬ್ಧ!

shringeri bandh
20/09/2026

ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಮಲೆನಾಡಿಗೆ ಭೇಟಿ ನೀಡಿ ತೆರಳಿದ ಬೆನ್ನಲ್ಲೇ, ವಿವಾದಿತ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಾಳೆ ಸಂಪೂರ್ಣ ಬಂದ್‌ಗೆ ಕರೆ ನೀಡಲಾಗಿದೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶೃಂಗೇರಿ ತಾಲೂಕು ಸಂಪೂರ್ಣ ಸ್ಥಬ್ಧವಾಗಲಿದೆ.

ಶೃಂಗೇರಿ ರೈತ ಒಕ್ಕೂಟ, ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳು ಈ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ವರ್ತಕರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಲು ನಿರ್ಧರಿಸಿದ್ದಾರೆ. ಅಲ್ಲದೆ, ಬಂದ್ ದಿನದಂದು ಶೃಂಗೇರಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಜರುಗಲಿದೆ.

ಆತಂಕದಲ್ಲಿ ಕಾಫಿನಾಡಿನ 137ಕ್ಕೂ ಹೆಚ್ಚು ಗ್ರಾಮಗಳು:

ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತಂದರೆ ಮಲೆನಾಡಿನ ಜನರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ ಎಂಬ ಆತಂಕ ತೀವ್ರಗೊಂಡಿದೆ. ಈ ವರದಿಗೆ ಮಲೆನಾಡಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಕಾಫಿನಾಡಿನ 137ಕ್ಕೂ ಹೆಚ್ಚು ಗ್ರಾಮಗಳು ಆತಂಕದ ನೆರಳಿನಲ್ಲಿ ದಿನ ದೂಡುತ್ತಿವೆ. ವರದಿಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಒತ್ತಾಯಿಸಿ ಕಳೆದ ಒಂದು ತಿಂಗಳಿಂದ ಮಲೆನಾಡಿನ ವಿವಿಧ ಭಾಗಗಳಲ್ಲಿ ನಿರಂತರ ಪ್ರತಿಭಟನೆಗಳು ನಡೆಯುತ್ತಿವೆ.

ಇತ್ತೀಚಿನ ಸುದ್ದಿ

deneme bonusu veren siteler gamdom giriş deneme bonusu veren siteler